ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಭೇಟಿ ಮಾಡಿದ ಮಾಜಿ ಸಚಿವ ರಮಾನಾಥ ರೈ - Karavali Times ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಭೇಟಿ ಮಾಡಿದ ಮಾಜಿ ಸಚಿವ ರಮಾನಾಥ ರೈ - Karavali Times

728x90

2 June 2021

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಭೇಟಿ ಮಾಡಿದ ಮಾಜಿ ಸಚಿವ ರಮಾನಾಥ ರೈ

 ಮಂಗಳೂರು, ಜೂನ್ 02, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ಬುಧವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಕರಾವಳಿಯಲ್ಲಿ ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಜನಪರ ಕೆಲಸಗಳ ಬಗ್ಗೆ ಚರ್ಚಿಸಿದರು.

ಕೊರೋನಾ ನಿಯಂತ್ರಣ ಮತ್ತು ಲಾಕ್ ಡೌನ್ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ವತಿಯಿಂದ ಕೈಗೊಂಡಿರುವ ಪರಿಹಾರ ಹಾಗೂ ಹೆಲ್ಪ್ ಲೈನ್ ನೆರವು ಕಾರ್ಯಕ್ರಮಗಳ ಬಗ್ಗೆ ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರು ಕೆಪಿಸಿಸಿ ಅಧ್ಯಕ್ಷರಿಗೆ ವಿವರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬ್ಲಾಕ್ ಸಮಿತಿಗಳು, ವಿವಿಧ ಮಂಚೂಣಿ ಸಂಘಟನೆಗಳು ಮತ್ತು ಜಿಲ್ಲಾ ಸಮಿತಿಯ ವತಿಯಿಂದ ನಡೆಯುತ್ತಿರುವ ವೈದ್ಯಕೀಯ ನೆರವು, ಆಂಬ್ಯುಲೆನ್ಸ್ ಸೇವೆ, ಆಕ್ಸಿಜನ್ ಒದಗಿಸುವುದು, ಆಹಾರ ಕಿಟ್ ವಿತರಣೆ, ಪ್ರತಿ ದಿನ ಆಹಾರ ವಿತರಣೆ ಬಗ್ಗೆ ವಿವರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಶ್ಲಾಘನೆ ವ್ಯಕ್ತಪಡಿಸಿದರು ಎಂದು ರಮಾನಾಥ ರೈ ಮಾಧ್ಯಮಗಳಿಗೆ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ. ಭೇಟಿ ಮಾಡಿದ ಮಾಜಿ ಸಚಿವ ರಮಾನಾಥ ರೈ Rating: 5 Reviewed By: karavali Times
Scroll to Top