ರಾಜ್ಯದ ಹಿರಿಯ ಶಾಸಕ ಸಿ.ಎಂ ಉದಾಸಿ ನಿಧನ - Karavali Times ರಾಜ್ಯದ ಹಿರಿಯ ಶಾಸಕ ಸಿ.ಎಂ ಉದಾಸಿ ನಿಧನ - Karavali Times

728x90

8 June 2021

ರಾಜ್ಯದ ಹಿರಿಯ ಶಾಸಕ ಸಿ.ಎಂ ಉದಾಸಿ ನಿಧನ

ಬೆಂಗಳೂರು, ಜೂನ್ 08, 2021 (ಕರಾವಳಿ ಟೈಮ್ಸ್) : ಅನಾರೋಗ್ಯದಿಂದ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ ಎಂ ಉದಾಸಿ (81) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ನಿಧನರಾಗಿದ್ದಾರೆ. 

ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳ ಕೊನೆಯ ವಾರದಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಉದಾಸಿ ಚಿಕಿತ್ಸೆ ಪಡೆಯುತ್ತಿದ್ದರು. 

ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ 2013 ಮತ್ತು 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಬುಧವಾರ ಹಾವೇರಿಯ ಹಾನಗಲ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿ ಪುತ್ರ ಶಿವಕುಮಾರ್ ಉದಾಸಿ ತಿಳಿಸಿದ್ದಾರೆ. 

ಹಿರಿಯ  ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿ.ಎಂ ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು   ಹಾನಗಲ್  ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ  ಅಪರೂಪದ ನೇತಾರರೊಬ್ಬರನ್ನು  ನಾಡು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ.  ಭಗವಂತ ಅವರ  ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಸಚಿವರಾದ ಬಸವರಾಜ ಬೊಮ್ಮಾಯಿ, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.


  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದ ಹಿರಿಯ ಶಾಸಕ ಸಿ.ಎಂ ಉದಾಸಿ ನಿಧನ Rating: 5 Reviewed By: karavali Times
Scroll to Top