ಬಂಟ್ವಾಳ, ಜುಲೈ 26, 2021 (ಕರಾವಳಿ ಟೈಮ್ಸ್) : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬಂಟ್ವಾಳ ಪ್ರೆಸ್ ಕ್ಲಬ್ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ವಿತರಕರಿಗೆ ಸನ್ಮಾನ ಕಾರ್ಯಕ್ರಮ ಜುಲೈ 28 ರಂದು ಬೆಳಿಗ್ಗೆ 10.30ಕ್ಕೆ ಬಿ ಸಿ ರೋಡಿನ ಪ್ರೆಸ್ ಕ್ಲಬ್‍ನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ದಿನಪತ್ರಿಕೆ ಮಾರಾಟಗಾರರಾದ ವಿಟ್ಲದ ರಾಜಮ್ಮ ಕೆ ವಿ, ವಗ್ಗದ ಲೋಕಯ್ಯ ಗೌಡ, ಬಿ ಸಿ ರೋಡು-ಮಿತ್ತಬೈಲಿನ ನರಸಿಂಹ ಪೈ ಅವರಿಗೆ ಸನ್ಮಾನ ನಡೆಯಲಿದೆ.
ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಬಂಟ್ವಾಳ ಉಪವಿಭಾಗ ಡಿವೈಎಸ್‍ಪಿ ವೆಲೆಂಟೈನ್ ಡಿ’ಸೋಜ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು, ಜಿಲ್ಲಾ ಕಾಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಬಂಟ್ವಾಳ ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ ಭಾಗವಹಿಸಲಿದ್ದಾರೆ ಎಂದು ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಜಂಟಿ ಪ್ರಕಟಣೆ ತಿಳಿಸಿದೆ.
0 comments:
Post a Comment