ಬಂಟ್ವಾಳ, ಜುಲೈ 06, 2021 (ಕರಾವಳಿ ಟೈಮ್ಸ್) : ಅಸಂಘಟಿತ ವರ್ಗದ ಕಾರ್ಮಿಕರಿಗಾಗಿ ಸರಕಾರ ಹಲವು ವಿವಿಧ ಯೋಜನೆಗಳನ್ನು ಘೋಷಿಸುತ್ತಿದ್ದು, ಕಾರ್ಮಿಕರು ತಮ್ಮನ್ನು ಇಲಾಖೆಯಡಿ ನೋಂದಾಯಿಸಿಕೊಂಡು ಈ ಎಲ್ಲಾ ಸರಕಾರಿ ಯೋಜನೆಗಳ ಸದುಪಯೋಗಪಡಿಸಿಕೊಳ್ಳುವಂತೆ ಮಾಜಿ ಸಚಿವ ಬಿ ರಮಾನಾಥ ರೈ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಹಾಗೂ ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾಂಗ್ರೆಸ್ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಅಮ್ಮುಂಜೆಯಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಉಚಿತ ನೋಂದಾವಣಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಿದ್ದರು. ಜಿ ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಧುಸೂದನ್ ಶೆಣೈ, ಕರಿಯಂಗಳ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವೀಣಾ ಆಚಾರ್ಯ, ಅಮ್ಮುಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪ್ರೇಮಲತಾ, ಅಮ್ಮುಂಜೆ ಗ್ರಾಮ ಪಂಚಾಯತ್ ಸದಸ್ಯ ರಝಾಕ್, ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್, ಲಕ್ಷ್ಮಿ ಶೆಟ್ಟಿ, ಕಳ್ಳಿಗೆ ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ್, ಪುಷ್ಪ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಮ್ಲಾನ್ ಓಬೊರು, ಅಮ್ಮುಂಜೆ ವಲಯ ಯುವ ಕಾಂಗ್ರೆಸ್ ಉಸ್ತುವಾರಿ ಸಂದೀಪ್ ಬೆಂಜನಪದವು, ಅಮ್ಮುಂಜೆ ವಲಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವೀನ್ ಬೆಂಜನಪದವು, ನರಿಕೊಂಬು ವಲಯ ಕಾಂಗ್ರೆಸ್ ಅಧ್ಯಕ್ಷ ಮಾಧವ ಕರ್ಬೆಟ್ಟು, ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಪದಾಧಿಕಾರಿ ಅರುಣ್ ಶೆಟ್ಟಿ ನರಿಕೊಂಬು, ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ಸಪಲ್ಯ, ಮುಹಮ್ಮದ್ ರಿಯಾಝ್ ನೆಹರುನಗರ ಮೊದಲಾದವರು ಭಾಗವಹಿಸಿದ್ದರು.
ಅಸಂಘಟಿತ ಕಾರ್ಮಿಕರ ಘಟಕದ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ರೋಶನ್ ರೈ ಸ್ವಾಗತಿಸಿ, ಅಮ್ಮುಂಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ವಂದಿಸಿದರು.
0 comments:
Post a Comment