ಬಂಟ್ವಾಳ, ಜುಲೈ 14, 2021 (ಕರಾವಳಿ ಟೈಮ್ಸ್) : ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮಿನಲ್ಲಿ ಮಹಿಳೆಯನ್ನು ಪರಿಚಯ ಮಾಡಿಕೊಂಡು ಬಳಿಕ ಸಲುಗೆ, ಪ್ರೀತಿಯ ನಾಟಕ ಮಾಡಿ ಅತ್ಯಾಚಾರ ಎಸಗಿದ ಆರೋಪಿ ಮುಹಮ್ಮದ್ ಅಯ್ಯೂಬ್ ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಇನ್ಸ್ಸ್ಟಾಗ್ರಾಮಿನಲ್ಲಿ ಈತನಿಗೆ ವಿವಾಹಿತ ಮಹಿಳೆಯ ಪರಿಚಯವಾಗಿದ್ದು ಬಳಿಕ ಆಕೆಯೊಂದಿಗೆ ಸಲುಗೆಯಿಂದ ವರ್ತಿಸಿ ಬಳಿಕ ಭೌತಿಕ ಸಂಪರ್ಕ ಸಾಧಿಸಿ ಸುತ್ತಾಟ ನಡೆಸಿದ್ದಲ್ಲದೆ ನಂತರ ಆಕೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಭೇಟಿ ಮಾಡಿ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದಾನೆ ಎನ್ನಲಾಗಿದೆ. ಅತ್ಯಾಚಾರ ನಡೆಸಿದ್ದಲ್ಲದೆ ಆಕೆಯ ಫೋಟೋ ತನ್ನ ಮೊಬೈಲಿನಲ್ಲಿ ಸೆರೆ ಹಿಡಿದು ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆಯನ್ನೂ ಹಾಕಿರುತ್ತಾನೆ.
ಈ ಬಗ್ಗೆ ಮಹಿಳೆ ಮನೆ ಮಂದಿಗೆ ವಿಷಯ ತಿಳಿಸಿ ಬಳಿಕ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಕಾರ್ಯಪ್ರವೃತ್ತರಾದ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕಲಂ 376, 506 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment