ಬಂಟ್ವಾಳ, ಜುಲೈ 08, 2021 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಪೆಟ್ರೋಲ್, ಡೀಸಿಲ್, ಗ್ಯಾಸ್ ಹಾಗೂ ಅಗತ್ಯ ವಸ್ತುಗಲ ಭೆಲೆ ಏರಿಕೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ದ ಸೈಕಲ್ ಜಾಥಾ ಹಾಗೂ ಪಾದಯಾತ್ರೆಯು ಜುಲೈ 12 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಬಂಟ್ವಾಳ-ಬಡ್ಡಕಟ್ಟೆ ಹನುಮಾನ್ ಮಂದಿರ ಬಳಿಯಿಂದ ಹೊರಡುವ ಜಾಥಾ ಬಿ ಸಿ ರೋಡು-ಕೈಕಂಬ ಜಂಕ್ಷನ್ನಿನಲ್ಲಿ ಸಮಾಪ್ತಿಗೊಳ್ಳಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದ್ದಾರೆ.
0 comments:
Post a Comment