ಮಂಗಳೂರು, ಜುಲೈ 17, 2021 (ಕರಾವಳಿ ಟೈಮ್ಸ್ ) : ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರ ಮತ್ತು ಸಾಮಾಜಿಕ ಜಾಲತಾಣದ ಪದಾಧಿಕಾರಿಗಳ ಪ್ರಥಮ ಸಭೆ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಅವರ ಅಧ್ಯಕ್ಷತೆ ಯಲ್ಲಿ ದ ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಜಿ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಸಂಘಟಿತ ಕಾರ್ಮಿಕರಿಗೆ ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳುವಳಿಕೆ ನೀಡಿ ಕಾರ್ಮಿಕ ಕಾರ್ಡ್ ಅವರ ಕೈಗೆ ಸಿಗುವಂತೆ ಸಾಧ್ಯವಾದಷ್ಟು ಶ್ರಮಿಸಬೇಕು. ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಿ ಮೂಡಿ ಬರಬೇಕು ಎಂದು ಆಶಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಮಾತನಾಡಿ, ಎಲ್ಲಾ ವಿಭಾಗದ ಅಸಂಘಟಿತ ಕಾರ್ಮಿಕರನ್ನು ಸಂಘಟಿತರನ್ನಾಗಿ ಮಾಡುವುದೇ ನಮ್ಮ ಆದ್ಯತೆಯಾಗಿದೆ ಎಂದರು. ಬ್ಲಾಕ್ ಮತ್ತು ವಲಯ ಮಟ್ಟದಲ್ಲಿ ಸಮಿತಿ ರಚಿಸಲು ಕರೆ ನೀಡಿದ ಅವರು ಬ್ಲಾಕ್ ಮಟ್ಟದಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ ಮಾಡಿ ಎಂದು ಬ್ಲಾಕ್ ಮತ್ತು ಜಿಲ್ಲಾ ಪದಾಧಿಕಾರಿಗಳಿಗೆ ಸಲಹೆ ನೀಡಿದರು. ಕಾಂಗ್ರೆಸ್ ಪಕ್ಚದ ಎಲ್ಲಾ ಯುವ ಕಾರ್ಯಕರ್ತರು ಆದಷ್ಟು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ಭಾಗವಹಿಸಿ ಬಿಜೆಪಿ ಮತ್ತು ಇತರೆ ಪಕ್ಷಗಳ ಸುಳ್ಳಿನ ರಾಜಕೀಯಕ್ಕೆ ಸಮರ್ಥವಾಗಿ ಪ್ರತಿಕ್ರಯಿಸಿ ಸರಕಾರದ ವೈಫಲ್ಯಗಳನ್ನು ಪ್ರತಿಯೊಬ್ಬ ನಾಗರಿಕರಿಗೆ ಮನದಟ್ಟು ಮಾಡಲು ಆದಷ್ಟು ಕೆಲಸ ಮಾಡಬೇಕು. ಈಗಿನ ಪರಿಸ್ಥಿತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಜನರು ತೊಡಗಿಸಿ ಕೊಂಡಿರುವುದರಿಂದ ಅದರಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚು ಸಕ್ರಿಯರಾಗಬೇಕು ಎಂದರು.
ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಅರುಣ್ ಶೆಟ್ಟಿ ನರಿಕೊಂಬು ಅವರು ಸಾಮಾಜಿಕ ಜಾಲತಾಣದ ಬಳಕೆ ಬಗ್ಗೆ ವಿವರಿಸಿದರು. ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷ ರೋಷನ್ ರೈ ಕಾರ್ಮಿಕರ ನೋಂದಾವಣಿ ಬಗ್ಗೆ ವಿವರಿಸಿದರು. ಜಿಲ್ಲಾ ಅಸಂಘಟಿತ ಸಮಿತಿಯ ಸಾಮಾಜಿಕ ಜಾಲತಾಣದ ನಿರಂಜನ್ ರೈ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪದ್ಮನಾಭ ಬಂಗೇರ ವಂದಿಸಿದರು.
0 comments:
Post a Comment