ಬಂಟ್ವಾಳ, ಜುಲೈ 24, 2021 (ಕರಾವಳಿ ಟೈಮ್ಸ್) : ತಾಲೂಕಿನ ಪ್ರಭಾವಿ ದಲಿತ ಮುಖಂಡ, ಅಮ್ಟೂರು ಗ್ರಾಮದ ಕೃಷ್ಣಾಪುರ ನಿವಾಸಿ ಭಾನುಚಂದ್ರ ಕೃಷ್ಣಾಪುರ (52) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.
ಹಲವು ದಲಿತಪರ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮುದಾಯದ ಮಂದಿಗೆ ಆಗುತ್ತಿದ್ದ ಅನ್ಯಾಯದ ವಿರುದ್ದವಾಗಿ ಮುಂಚೂಣಿಯಲ್ಲಿದ್ದು ಧ್ವನಿಯಾಗಿದ್ದ ಇವರು ಸಾಮಾಜಿಕ, ರಾಜಕೀಯ ರಂಗದಲ್ಲೂ ಸಕ್ರಿಯರಾಗಿದ್ದರು. ಮೃತರು ಪತ್ನಿ, ಮಕ್ಕಳ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
0 comments:
Post a Comment