ಬಂಟ್ವಾಳ, ಜುಲೈ 30, 2021 (ಕರಾವಳಿ ಟೈಮ್ಸ್) : ತಾಲೂಕಿನ ಕಳ್ಳಿಗೆ ಗ್ರಾಮದ ನಿವಾಸಿ ಲಕ್ಷ್ಮಣ ಅವರ ಪುತ್ರ ಕಾರ್ತಿಕ್ (24) ಎಂಬ ಯುವಕ ಮೃತದೇಹ ಬಂಟ್ವಾಳ ದೇವಂದಬೆಟ್ಟು ಬಳಿಯ ರೈಲ್ವೆ ಹಳಿಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಶಯಾಸ್ಪದವಾಗಿ ಪತ್ತೆಯಾಗಿದೆ.
ಮೃತ ಕಾರ್ತಿಕ್ ಗುರುವಾರ ಸಂಜೆ ಮನೆಯಿಂದ ಹೊರಟಿದ್ದು, ರಾತ್ರಿ 11 ಗಂಟೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಆತಂಕಗೊಂಡು ಹುಡುಕಾಟ ಆರಂಭಿಸಿದ್ದರು. ಶುಕ್ರವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರ್ತಿಕ್ ಮೃತದೇಹ ದೇವಂದಬೆಟ್ಟು ಬಳಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಮೃತಪಟ್ಟ ಬಗ್ಗೆ ಸಂಶಯ ಇದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೋಲೀಸರ ತನಿಖೆ ಮುಂದುವರಿದಿದೆ.
0 comments:
Post a Comment