ಬೆಂಗಳೂರು, ಜುಲೈ 14, 2021 (ಕರಾವಳಿ ಟೈಮ್ಸ್) : ಅನುಮತಿ ರಹಿತ ಪ್ರತಿಭಟನೆಗೆ ಸಂಬಂಧಿಸಿದಂತೆ ರಾಷ್ಟ್ರ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಬಿ ವಿ ಶ್ರೀನಿವಾಸ್ ಹಾಗೂ ರಕ್ಷಾ ರಾಮಯ್ಯ ಸಹಿತ 17 ಮಂದಿ ಕಾಂಗ್ರೆಸ್ ನಾಯಕರ ವಿರುದ್ದ ಸಂಜಯನಗರ ಪೆÇಲೀಸ್ ಠಾಣೆಯಲ್ಲಿ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ವತಿಯಿಂದ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆ ಮುಂಭಾಗ ಸೈಕಲ್ ಜಾಥಾ ಹಾಗೂ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಗೆ ಪೊಲೀಸರ ಅನುಮತಿ ಕೇಳಲಾಗಿತ್ತಾದರೂ ಕೋವಿಡ್ ನಿಯಮಾವಳಿಯಂತೆ ಅನುಮತಿ ನಿರಾಕರಿಸಲಾಗಿತ್ತು. ಅದಾಗ್ಯೂ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಪ್ರತಿಭಟನೆಗೆ ಯಾವುದೇ ಅನುಮತಿ ಪಡೆಯದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳದೇ, ಸರಕಾರದ ಕೊರೋನಾ ಲಾಕ್ ಡೌನ್ ನಿಯಮಾವಳಿ ಉಲ್ಲಂಘಿಸಲಾಗಿದೆ ಎಂದು ಪೊಲೀಸರು ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ.
0 comments:
Post a Comment