ನವದೆಹಲಿ, ಜುಲೈ 30, 2021 (ಕರಾವಳಿ ಟೈಮ್ಸ್) : ಕೋವಿಡ್-19 ಹಾಗೂ ಲಾಕ್ ಡೌನ್ ಹಿನ್ನಲೆಯಲ್ಲಿ 2019ರ ಮಾರ್ಚ್ 25 ರಿಂದ ನಿರ್ಬಂಧಿಸಲಾಗಿರುವ ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ಇದೀಗ ಮತ್ತೆ ನಿರ್ಬಂಧ ಮುಂದುವರಿಸಲಾಗಿದ್ದು, ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಆದರೆ ಭಾರತ ಸರಕಾರದ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಇದೀಗ ವಿಸ್ತರಿಸಿರುವ ನಿರ್ಬಂಧ ಅದೇಶ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.
ಕೊರೋನಾ ಮಹಾಮಾರಿ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ 2019 ರ ಮಾರ್ಚ್ 23 ರಿಂದ ದೇಶಾದ್ಯಂತ ಲಾಕ್ ಡೌನ್ ವಿಧಿಸಿದ ಬಳಿಕ ಮಾ 25ರಿಂದ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಹಾಗೂ ಜುಲೈ ತಿಂಗಳಿನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ‘ಏರ್ ಬಬಲ್’ ವ್ಯವಸ್ಥೆಗಳಡಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನಕ್ಕೆ ಸರಕಾರ ಅನುಮತಿಸಿದೆ.
ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‍ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು. ಅದು ಈಗಲೂ ಮುಂದುವರಿದಿದೆ.
0 comments:
Post a Comment