ಬಂಟ್ವಾಳ, ಜುಲೈ 14, 2021 (ಕರಾವಳಿ ಟೈಮ್ಸ್) : ಕೊರೊನಾ ನಿಯಂತ್ರಣಕ್ಕಾಗಿ ಕೆಎಸ್‍ಆರ್‍ಟಿಸಿ ಸಂಸ್ಥೆ ಆರಂಭಿಸಿದ ಸಾರಿಗೆ ಸುರಕ್ಷಾ ಐಸಿಯು ಬಸ್ ಬಂಟ್ವಾಳಕ್ಕೆ ಆಗಮಿಸಿದ್ದು, ಮಂಗಳವಾರ ತಾಲೂಕಿನ ಪವಿತ್ರ ಕ್ಷೇತ್ರ ಪೆÇಳಲಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾಜಕ್ಕೆ ಅರ್ಪಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್, ಧಾರ್ಮಿಕ ದತ್ತಿ ಇಲಾಖಾ ಆಯುಕ್ತೆ ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ, .ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ, ಬಿಸಿರೋಡು ಘಟಕ ವ್ಯವಸ್ಥಾಪಕ ಶ್ರೀಶ ಭಟ್, ಅಧಿಕಾರಿಗಳಾದ ರಮೇಶ್ ಶೆಟ್ಟಿ, ರವೀನಾ, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ತಾರನಾಥ ಆಳ್ವ, ಸೂರ್ಯ ನಾರಾಯಣ ರಾವ್, ದೇವಸ್ಥಾನದ ಸಿಒ ಜಯಮ್ಮ, ದೇವಳದ ಪ್ರಧಾನ ಅರ್ಚಕ ಮಾದವ ಭಟ್, ಬುಡಾ ಆದ್ಯಕ್ಷ ಬಿ ದೇವದಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment