ಹುಬ್ಬಳ್ಳಿ, ಜುಲೈ 28, 2021 (ಕರಾವಳಿ ಟೈಮ್ಸ್) : ಜಾತ್ಯತೀತ ಜನತಾದಳ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಜುಲೈ 30 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕೈ ಪಾಳಯ ಸೇರಿಕೊಳ್ಳಲಿದ್ದಾರೆ. ಜು
ಜುಲೈ 30 ರಂದು ಶುಕ್ರವಾರ ಬೆಳಗ್ಗೆ 9 ಘಂಟೆಗೆ ಹುಬ್ಬಳ್ಳಿಯ ಗೋಕುಲ್ ಗಾರ್ಡನ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹಿತ ಪಕ್ಷದ ಮುಖಂಡರ ಸಮ್ಮುಖದಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಧು ಬಂಗಾರಪ್ಪ ಅವರ ಜತೆ ಇನ್ನೂ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ಕಿರಣ್ ಹಿರೇಮಠ, ಭೈರಿದೇವರಕೊಪ್ಪ ಗ್ರಾಮದ ಹಿರಿಯರು ಹಾಗೂ ಪ್ರಭಾವಿ ಜೆಡಿಎಸ್ ಮುಖಂಡ ಬಸವರಾಜ್ ಮಾಯಕರ್ (ಬೆಲ್ಲದ) ಇವರ ನೇತೃತ್ವದಲ್ಲಿ ನೂರಾರು ಜಾತ್ಯತೀತ ಜನತಾದಳದ ಕಾರ್ಯಕರ್ತರೂ ಅದೇ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ತಿಳಿಸಿದ್ದಾರೆ.
0 comments:
Post a Comment