ನವದೆಹಲಿ, ಜುಲೈ 12, 2021 (ಕರಾವಳಿ ಟೈಮ್ಸ್) : 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ 12 ರಂದು ನೀಟ್ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸೋಮವಾರ ಪ್ರಕಟಿಸಿದ್ದಾರೆ.
ಜುಲೈ 13 (ನಾಳೆ) ರ ಸಂಜೆ 5 ಗಂಟೆಯಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‍ಟಿಎ)ಯ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ ಆಗಲಿದೆ ಎಂದವರು ತಿಳಿಸಿದ್ದಾರೆ. ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155 ರಿಂದ 198 ಕ್ಕೆ ಹೆಚ್ಚಿಸಲಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದ್ದಾರೆ.
0 comments:
Post a Comment