ಬೆಂಗಳೂರು, ಜುಲೈ 09, 2021 (ಕರಾವಳಿ ಟೈಮ್ಸ್) : ಪ್ರತಿ ಸಂದರ್ಭದಲ್ಲೂ ವಾಹನ ಸವಾರರು ವಾಹನಗಳ ಅಗತ್ಯ ದಾಖಲೆಗಳ ಹಾರ್ಡ್ ಕಾಪಿ ಕೊಂಡು ಹೋಗಲು ಆಗುತ್ತಿರುವ ಅನಾನುಕೂಲತೆ ಗಮನದಲ್ಲಿಟ್ಟುಕೊಂಡು ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಸರಕಾರ ಅವಕಾಶ ಕಲ್ಪಿಸಿದ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೆÇಲೀಸರು ಇದೀಗ ಡಿಜಿಟಿಲೀಕರಣಕ್ಕೆ ಒಗ್ಗಿಸಿಕೊಂಡಿದ್ದಾರೆ.
ಇನ್ನು ಮುಂದೆ ಪೆÇಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೆÇಲೀಸ್ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.
ಡಿಜಿ ಲಾಕರ್ ಅಥವಾ ಎಂ ಪರಿವಾಹನ್ ಅಪ್ ಗಳಲ್ಲಿ ವಾಹನ ಸವಾರರು ತಮ್ಮ ವಾಹನಗಳ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ವಾಹನ ತಪಾಸಣೆ ನಡೆಸುವ ಅಧಿಕಾರಿಗಳು ಮೊಬೈಲ್ ಮೂಲಕ ಡಿಜಿಟಲ್ ರೂಪದಲ್ಲಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಧಿಕೃತ ಎಂದು ಪರಿಗಣಿಸಬೇಕು ಎಂದು ರವಿಕಾಂತೇಗೌಡ ಸೂಚಿಸಿದ್ದಾರೆ.
ಡಿಜಿ ಲಾಕರ್ ಹಾಗೂ ಎಂ ಪರಿವಾಹನ್ ಈ ಎರಡು ಅಪ್ಲಿಕೇಷನ್‍ನಲ್ಲಿ ಡಿಜಿಟಲ್ ರೂಪದಲ್ಲಿರುವ ದಾಖಲೆಗಳು ಸ್ವೀಕಾರಾರ್ಹ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯಗಳು ಸ್ಪಷ್ಟಪಡಿಸಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಈ ನಿಯಮ ಅಳವಡಿಕೆಗೆ ಮುಂದಾಗಿದೆ.
ಅಧಿಕಾರಿಗಳು ಇ ಚಲನ್ ಆಪ್ ಮೂಲಕ ಕ್ಯೂ ಆರ್ ಕೋಡ್ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಸಿ ಡಿಜಿಟಲ್ ದಾಖಲೆಗಳನ್ನು ಪರಿಶೀಲಿಸಬಹುದು. ಇದರಿಂದಾಗಿ ನಕಲಿ ದಾಖಲೆ ಹಾವಳಿಯನ್ನು ತಡೆಗಟ್ಟಲು ಸಾಧ್ಯ ಇದೆ. ವಾಹನ ಸವಾರರು ಪ್ಲೇ ಸ್ಟೋರಿನಲ್ಲಿ ಡಿಜಿ ಲಾಕರ್ ಮತ್ತು ಎಂ ಪರಿವಾಹನ್ ಡೌನ್‍ಲೋಡ್ ಮಾಡಿಕೊಂಡು ಆಧಾರ್ ಸಂಖ್ಯೆ ದಾಖಲಿಸಿ ಕೆವೈಸಿ ದಾಖಲಿಸಿ ನೋಂದಣಿ ಮಾಡಿಕೊಳ್ಳಬೇಕು.
ತದನಂತರ ಕರ್ನಾಟಕ ಸರಕಾರವನ್ನು ಆಯ್ಕೆ ಮಾಡಿಕೊಂಡು ನಿರ್ದಿಷ್ಟ ದಾಖಲೆಗಳನ್ನು ಡೌನ್‍ಲೋಡ್ ಹಾಗೂ ಸೇವ್ ಮಾಡಿಕೊಳ್ಳಬಹುದು. ವಾಹನ ಮಾಲೀಕರಲ್ಲದವರು ಚಾಲನೆ ಮಾಡುತ್ತಿದ್ದರೆ ವಾಹನದ ಮಾಲೀಕನ ಆಪ್‍ನಿಂದ ದಾಖಲಾತಿಗಳನ್ನು ವರ್ಗಾವಣೆ ಮಾಡಿಕೊಂಡು ತಪಾಸಣೆ ವೇಳೆ ಹಾಜರುಪಡಿಸಬಹುದು.
ಇದರಿಂದಾಗಿ ಡಿಜಿಟಲ್ ದಾಖಲೆಗಳಿಂದ ಅಸಲಿ ದಾಖಲೆಗಳು ಕಳೆದುಹೋಗುವ ಭಯ ಇಲ್ಲವಾಗುತ್ತದೆ. ಪೆÇಲೀಸರಿಗೂ ಕೂಡ ಈ ವ್ಯವಸ್ಥೆ ಸೂಕ್ತವಾಗಿದೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.
0 comments:
Post a Comment