ಬಂಟ್ವಾಳ, ಜುಲೈ 02, 2021 (ಕರಾವಳಿ ಟೈಮ್ಸ್) : ತಾಲೂಕು ಕಾನೂನು ಸೇವೆಗಳ ಪ್ರಾದಿಕಾರ ಬಂಟ್ವಾಳ ತಾಲೂಕು ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕೋವಿಡ್-19 2ನೇ ಅಲೆಯಲ್ಲಿ ಸಂಕಷ್ಟದಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಕ್ಷಣಾ ಮತ್ತು ನೈರ್ಮಲ್ಯೀಕರಣದ ಕಿಟ್ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಬಂಟ್ವಾಳ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಾಲ ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಿ ಕಟ್ಟಡ ಕಾರ್ಮಿಕರಿಗೆ ಮೂಲಭೂತ ಹಕ್ಕುಗಳ, ರಕ್ಷಣೆ ಹಾಗೂ ನೈರ್ಮಲ್ಯೀಕರಣದ ಬಗ್ಗೆ ಮಾಹಿತಿ ನೀಡಿದರು.
ಬಂಟ್ವಾಳ ಸಿವಿಲ್ ಪ್ರಧಾನ ನ್ಯಾಯಾಧೀಶೆ ರಮ್ಯ ಎಚ್ ಆರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ಜಿ ತಿಮ್ಮಾಪುರ, ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಕಾರ್ಯದರ್ಶಿ ಹರಿಣಿ ಕುಮಾರಿ ಡಿ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಗಣೇಶಾನಂದ ಸೋಮಯಾಜಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಮಿಕ ಇಲಾಖಾ ನಿರೀಕ್ಷಕಿ ಮೆರ್ಲಿನ್ ಗ್ರೇಸಿ ಡಿ’ಸೋಜ ಸ್ವಾಗತಿಸಿ, ವಂದಿಸಿದರು.
0 comments:
Post a Comment