ಬಂಟ್ವಾಳ, ಜುಲೈ 30, 2021 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕದಲ್ಲಿ ಅಟೋ ರಿಕ್ಷಾ ಅಪಘಾತಕ್ಕೀಡಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದ ನರಿಕೊಂಬು ಗ್ರಾಮದ ಉಪ್ಪುಗುಡ್ಡೆ ನಿವಾಸಿ ದಿವಂಗತ ಇಬ್ರಾಹಿಂ ಅವರ ಪತ್ನಿ ಸಫಿಯಾ ಅವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಶುಕ್ರವಾರ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಫಿಯಾ ಅವರು ಬುಧವಾರ ಮಧ್ಯಾಹ್ನ 12.30ರ ವೇಳೆಗೆ ಗುಡ್ಡೆಅಂಗಡಿಯಿಂದ ಪಾಣೆಮಂಗಳೂರು ಕಡೆ ಅನ್ಸಾರ್ ಎಂಬವರ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆಲಡ್ಕದಲ್ಲಿ ಅಟೋ ರಿಕ್ಷಾ ಅಂಗಡಿ ಕಟ್ಟಡದ ಮೆಟ್ಟಿಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಈ ಸಂದರ್ಭ ಸಫಿಯಾ ಅವರು ರಿಕ್ಷಾದಿಂದ ಹೊರಗೆಸೆಯಲ್ಪಟ್ಟು ಸೊಂಟಕ್ಕೆ ಗಾಯವಾಗಿರುತ್ತದೆ. ಗಾಯಾಳು ಸಫಿಯಾ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 71/2021 ಕಲಂ 279, 337 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment