ಬಂಟ್ವಾಳ, ಜುಲೈ 07, 2021 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಮಂಚಿ ನಿವಾಸಿ, ಕರ್ನಾಟಕ ಬ್ಯಾಂಕ್ ಉದ್ಯೋಗಿ ಗಣೇಶ ನಾಯ್ಕ ಕಂಚಿಲ (52) ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗಣೇಶ ಅವರು ಬುಧವಾರ ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಪಾಣೆಮಂಗಳೂರು ಹೆದ್ದಾರಿಯಲ್ಲಿ ಅಪರಿಚಿತ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಅಪಘಾತದ ತೀವ್ರೆತೆಗೆ ರಸ್ತೆಗೆಸೆಯಲ್ಪಟ್ಟ ಗಣೇಶ ಅವರು ಗಂಭೀರ ಗಾಯಗೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
0 comments:
Post a Comment