ಬಂಟ್ವಾಳ, ಆಗಸ್ಟ್ 03, 2021 (ಕರಾವಳಿ ಟೈಮ್ಸ್) : ಪೊಲೀಸ್ ಇಲಾಖೆಯ ಕಾನೂನು ಹಾಗೂ ಸುವ್ಯವಸ್ಥೆಯ ಎಡಿಜಿಪಿ ಪ್ರತಾಪ್ ರೆಡ್ಡಿ ಅವರು ಮಂಗಳವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಕೇರಳ ಗಡಿಭಾಗವಾದ ಸಾಲೆತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಚೆಕ್ ಪೆÇೀಸ್ಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ, ಜಿಲ್ಲಾ ಎಸ್ಪಿ ಹೃಷಿಕೇಶ್ ಸೊನಾವಣೆ ಭಗವಾನ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಮೊದಲಾದವರು ಜೊತೆಗಿದ್ದರು.
ಕೇರಳದಿಂದ ಆಗಮಿಸುವ ಸಾರ್ವಜನಿಕರ ತಪಾಸಣೆ ಸಂಬಂಧಿತ ಕೋವಿಡ್ ಮಾರ್ಗಸೂಚಿಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿದ ಪ್ರತಾಪ್ ರೆಡ್ಡಿ ಪೊಲೀಸರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
0 comments:
Post a Comment