ಬೆಂಗಳೂರು, ಆಗಸ್ಟ್ 06, 2021 (ಕರಾವಳಿ ಟೈಮ್ಸ್) : ಮತ್ತೆ ಏರುತ್ತಿರುವ ಕೋವಿಡ್ ಸೋಂಕು ನಿಯಂತ್ರಿಸಲು ಸಿಎಂ ಬೊಮ್ಮಾಯಿ ನೇತೃತ್ವದ ನೂತನ ಸರಕಾರ ಮತ್ತೆ ರಾಜ್ಯದಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದ್ದು, ರಾತ್ರಿ ಕಫ್ರ್ಯೂ ರಾತ್ರಿ 10 ಇದ್ದದ್ದನ್ನು 9ಕ್ಕಿಳಿಸಿದೆ ಹಾಗೂ ಕೊರೋನಾ ಜಾಸ್ತಿ ಇರುವ ರಾಜ್ಯಗಳ ಗಡಿ ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ವಾರಾಂತ್ಯ ಕಫ್ರ್ಯೂ ವಿಧಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಿಸಲಾಗಿದೆ. ಇಂದಿನಿಂದ ರಾತ್ರಿ 10 ಗಂಟೆ ಬದಲು ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದರು. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದಲೇ ಶನಿವಾರ ಮತ್ತು ಭಾನುವಾರ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಕೇರಳ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಗಳೂರು, ಮಡಿಕೇರಿ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ ವಾರಾಂತ್ಯ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.
0 comments:
Post a Comment