ಬಂಟ್ವಾಳ, ಆಗಸ್ಟ್ 23, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ, ನರಿಕೊಂಬು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸುಲೈಮಾನ್ ನೆಹರುನಗರ ಅವರನ್ನು ನೇಮಕಗೊಳಿಸಲಾಗಿದೆ.
ಮಾಜಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್ ಅವರು ಈ ನೇಮಕಗೊಳಿಸಿ ಆದೇಶಿಸಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಾಜಿ ಸಚಿವ ಬಿ ರಮಾನಾಥ ರೈ ಅವರು ಸುಲೈಮಾನ್ ಅವರಿಗೆ ನೇಮಕ ಆದೇಶ ಪತ್ರ ಹಸ್ತಾಂತರಿಸಿದರು.
ಈ ಸಂದರ್ಭ ಜಿ ಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಬಂಟ್ವಾಳ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಶಾಂತ್ ಕುಲಾಲ್ ಉಪಸ್ಥಿತರಿದ್ದರು.
0 comments:
Post a Comment