ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಆ. 24 ರಂದು ಬಿ.ಸಿ.ರೋಡಿನಲ್ಲಿ ಮಹಿಳಾ ಕಾಂಗ್ರೆಸ್ ಸಮಾವೇಶ  - Karavali Times ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಆ. 24 ರಂದು ಬಿ.ಸಿ.ರೋಡಿನಲ್ಲಿ ಮಹಿಳಾ ಕಾಂಗ್ರೆಸ್ ಸಮಾವೇಶ  - Karavali Times

728x90

22 August 2021

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಆ. 24 ರಂದು ಬಿ.ಸಿ.ರೋಡಿನಲ್ಲಿ ಮಹಿಳಾ ಕಾಂಗ್ರೆಸ್ ಸಮಾವೇಶ 

 ಬಂಟ್ವಾಳ, ಆಗಸ್ಟ್ 22, 2021 (ಕರಾವಳಿ ಟೈಮ್ಸ್) : ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಸಂಭ್ರಮಚಾರಣೆಯ ಪ್ರಯುಕ್ತ ಮಹಿಳಾ ಸಮಾವೇಶ ಆಗಸ್ಟ್ 24 ರಂದು ಮಂಗಳವಾರ ಬೆಳಿಗ್ಗೆ 9.30 ರಿಂದ ಬಿ ಸಿ ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ.

 ಕೆಪಿಸಿಸಿ ಬಂಟ್ವಾಳ ಉಸ್ತುವಾರಿ ಸವಿತಾ ರಮೇಶ್ ಸಮಾವೇಶ ಉದ್ಘಾಟಿಸಲಿದ್ದು, ಮುಖ್ಯ ಭಾಷಣಕಾರರಾಗಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಭವ್ಯ ನರಸಿಂಹಮೂರ್ತಿ ಭಾಗವಹಿಸುವರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಅಧ್ಯಕ್ಷತೆ ವಹಿಸುವರು. 

 ಮಾಜಿ ಸಚಿವ ಬಿ ರಮಾನಾಥ ರೈ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಭಾಗವಹಿಸುವರು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಜಯಂತಿ ವಿ ಪೂಜಾರಿ ಹಾಗೂ ಲವಿನಾ ಮೊರಾಸ್ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಆ. 24 ರಂದು ಬಿ.ಸಿ.ರೋಡಿನಲ್ಲಿ ಮಹಿಳಾ ಕಾಂಗ್ರೆಸ್ ಸಮಾವೇಶ  Rating: 5 Reviewed By: karavali Times
Scroll to Top