ಟೋಕಿಯೊ, ಆಗಸ್ಟ್ 08, 2021 (ಕರಾವಳಿ ಟೈಮ್ಸ್) : ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ತ್ರೋ ವಿಭಾಗದಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದುಕೊಳ್ಳುವ ಮೂಲಕ ಐತಿಹಾಸಿಕ ಸಾಧನೆಗೈದಿದ್ದಾರೆ.
ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ ದಾಖಲೆಯ 87.58ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದು ಅಗ್ರ ಸ್ಥಾನಿಯಾಗುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಆ ಮೂಲಕ ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಕೀರ್ತಿಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ.
2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ವೈಯುಕ್ತಿಕ ಶೂಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಬಳಿಕ ನೀರಜ್ ಚೋಪ್ರಾ ಒಲಿಂಪಿಕ್ಸ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪರ ಸ್ವರ್ಣ ಪದಕ ಗೆದ್ದ ಸಾಧನೆ ಮಾಡಿದ್ದಾರೆ.
0 comments:
Post a Comment