ಪದವಿ ಪೂರ್ವ ಕಾಲೇಜು ಆರಂಭಕ್ಕೆ ಸರಕಾರದಿಂದ ಮಾರ್ಗಸೂಚಿ ಪ್ರಕಟ - Karavali Times ಪದವಿ ಪೂರ್ವ ಕಾಲೇಜು ಆರಂಭಕ್ಕೆ ಸರಕಾರದಿಂದ ಮಾರ್ಗಸೂಚಿ ಪ್ರಕಟ - Karavali Times

728x90

20 August 2021

ಪದವಿ ಪೂರ್ವ ಕಾಲೇಜು ಆರಂಭಕ್ಕೆ ಸರಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು, ಆಗಸ್ಟ್ 20, 2021 (ಕರಾವಳಿ ಟೈಮ್ಸ್) : ಆಗಸ್ಟ್ 23 ರಿಂದ ಪದವಿಪೂರ್ವ ಕಾಲೇಜು ಆರಂಭಿಸಲು ಸಿದ್ದತೆ ನಡೆಸಿರುವ ಸರಕಾರ ಈ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಶೇಕಡಾ 2ಕ್ಕಿಂತ ಕಡಿಮೆ ಕೊರೋನಾ ಪಾಸಿಟಿವಿಟಿ ಇರುವ ಜಿಲ್ಲೆಗಳಲ್ಲಿ ಕಾಲೇಜು ತೆರೆಯಲು ಸೂಚಿಸಲಾಗಿದೆ. ಏಕಕಾಲದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿ ನಡೆಸಲು ಸಕಲ ಸಿದ್ದತೆ ನಡೆಸಲಾಗಿದೆ. 

ವಾರದ ಮೊದಲ 3 ದಿನ ಶೇಕಡಾ 50ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇಕಡಾ 50 ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಬೇಕು. ಉಳಿದ ಶೇಕಡಾ 50ರಷ್ಟು ವಿದ್ಯಾರ್ಥಿಗಳಿಗೆ ಮನೆಯಲ್ಲೇ ಆನ್ ಲೈನ್ ತರಗತಿ ನಡೆಸುವುದು. ಗುರುವಾರ, ಶುಕ್ರವಾರ, ಶನಿವಾರ ಉಳಿದ ಮಕ್ಕಳಿಗೆ ತರಗತಿ ನಡೆಸುವ ಬಗ್ಗೆ ಸೂಚನೆ ನೀಡಲಾಗಿದೆ. 

ವಿಶಾಲ ಕೊಠಡಿಗಳಿದ್ದರೆ ವಾರದ ಎಲ್ಲಾ ದಿನ ಭೌತಿಕ ತರಗತಿ ನಡೆಸಬಹುದು, ಕಾಲೇಜು ಆವರಣದಲ್ಲಿ ದೈಹಿಕ ಅಂತರ ಕಡ್ಡಾಯವಾಗಿರುತ್ತದೆ. ಪ್ರಿನ್ಸಿಪಾಲ್, ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು, ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಪೆÇೀಷಕರ ಒಪ್ಪಿಗೆ ಬೇಕು, ವಿದ್ಯಾರ್ಥಿಗಳಿಗೆ ಕೊವಿಡ್-19 ನೆಗೆಟಿವ್ ವರದಿ ಕಡ್ಡಾಯ, ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳಿಂದ ಕೊವಿಡ್ ನಿಯಮಗಳ ಉಲ್ಲಂಘನೆಯಾಗದಂತೆ ಗಮನಿಸಬೇಕು, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ, ಕೆಮ್ಮುವಾಗ, ಸೀನುವಾಗ ಕರವಸ್ತ್ರ ಅಡ್ಡ ಹಿಡಿಯಬೇಕು, ಎಲ್ಲೆಂದರಲ್ಲಿ ಉಗುಳಬಾರದು, ಕಾಲೇಜು ಆರಂಭಕ್ಕೆ ಮುನ್ನ ಇಡೀ ಆವರಣ ಹಾಗೂ ಕೊಠಡಿಗಳ ಸ್ಯಾನಿಟೈಸ್ ಮಾಡಬೇಕು, ಕೊವಿಡ್‍ಗೆ ಬಳಸಿದ ಕಟ್ಟಡಗಳನ್ನ ಎರೆಡೆರಡು ಬಾರಿ ಸ್ಯಾನಿಟೈಸ್ ಮಾಡಬೇಕು, ಸಾಮೂಹಿಕ ಪ್ರಾರ್ಥನೆ, ಕ್ರೀಡೆ ಎಲ್ಲಾ ಚಟುವಟಿಕೆಗಳಿಗೆ ಕೋವಿಡ್ ನಿಯಮ ಕಡ್ಡಾಯ, ಪ್ರವೇಶ ಧ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಹಾಗೂ ಸ್ಯಾನಿಟೈಸರ್ ಕಡ್ಡಾಯವಾಗಿ ಇರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪದವಿ ಪೂರ್ವ ಕಾಲೇಜು ಆರಂಭಕ್ಕೆ ಸರಕಾರದಿಂದ ಮಾರ್ಗಸೂಚಿ ಪ್ರಕಟ Rating: 5 Reviewed By: karavali Times
Scroll to Top