ಬೆಂಗಳೂರು, ಆಗಸ್ಟ್ 20, 2021 (ಕರಾವಳಿ ಟೈಮ್ಸ್) : ಸೆಪ್ಟೆಂಬರ್ 27 ಹಾಗೂ 29 ರಂದು ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ಸರಳೀಕೃತ ಮಾದರಿಯಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ.
2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ 2019 ರ ಎಪ್ರಿಲ್ ಪರೀಕ್ಷೆಗೆ ಪ್ರಥಮ ಬಾರಿಗೆ ನೋಂದಾಯಿಸಿ, ಕೊವಿಡ್ ಸೋಂಕು ಕಾರಣದಿಂದ ಗೈರಾದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು.
ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು. ಸೆಪ್ಟೆಂಬರ್ 27 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದ್ದು, ಸೆಪ್ಟೆಂಬರ್ 29 ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆಗಳು ನಡೆಯಲಿವೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
0 comments:
Post a Comment