ಬಂಟ್ವಾಳ, ಆಗಸ್ಟ್ 15, 2021 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ಅಂಗನವಾಡಿ ಕೇಂದ್ರದ ವತಿಯಿಂದ ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಸ್ಥಳೀಯ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಅಂಗನವಾಡಿ ಶಿಕ್ಷಕಿ ಪ್ರೇಮಾ, ಸಹಾಯಕಿ ಜ್ಯೋತಿ, ಜಯಲಕ್ಷ್ಮಿ ಪಾಣೆಮಂಗಳೂರು, ಪ್ರಮುಖರಾದ ಹುಸೈನ್ ಬಂಗ್ಲೆಗುಡ್ಡೆ, ಮುಹಮ್ಮದ್ ಬಂಗ್ಲೆಗುಡ್ಡೆ, ಇರ್ಶಾದ್ ಗುಡ್ಡೆಅಂಗಡಿ, ಖಾದರ್ ಬಂಗ್ಲೆಗುಡ್ಡೆ, ಕೈಫ್ ಗುಡ್ಡೆಅಂಗಡಿ, ಹಬೀಬ್ ಬಂಗ್ಲೆಗುಡ್ಡೆ, ಕಬೀರ್ ಬಂಗ್ಲೆಗುಡ್ಡೆ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment