ಮಂಗಳೂರು, ಆಗಸ್ಟ್ 03, 2021 (ಕರಾವಳಿ ಟೈಮ್ಸ್) : ಕೇರಳದಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿರುವ ಕೊರೋನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಗೂ ವ್ಯಾಪಕ ಆತಂಕ ಉಂಟು ಮಾಡಿರುವ ಹಿನ್ನಲೆಯಲ್ಲಿ ಮಂಗಳೂರು ವಿಶ್ವಾವಿದ್ಯಾನಿಲಯ ಪ್ರಸ್ತುತ ನಡೆಸುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ಹಿನ್ನಲೆಯಲ್ಲಿ ನೆರೆ ರಾಜ್ಯಗಳ ಗಡಿಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಮಂಗಳೂರು ವಿವಿಗೆ ಸಂಬಂಧಿಸಿದಂತೆ ಹೆಚ್ಚಿನ ವಿದ್ಯಾರ್ಥಿಗಳು ಹೊರ ರಾಜ್ಯದವರಾಗಿರುವುದರಿಂದ ಡೀಸಿ ಈ ಆದೇಶ ಹೊರಡಿಸಿದ್ದಾರೆ. ವಿವಿ ಪದವಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ ಎಂದು ಡೀಸಿ ಆದೇಶದಲ್ಲಿ ತಿಳಿಸಿದ್ದಾರೆ.
0 comments:
Post a Comment