ನವದೆಹಲಿ, ಆಗಸ್ಟ್ 03, 2021 (ಕರಾವಳಿ ಟೈಮ್ಸ್) : ಸಿಬಿಎಸ್‍ಇ 10ನೇ ತರಗತಿ ಫಲಿತಾಂಶ ಮಂಗಳವಾರ ಮಧ್ಯಾಹ್ನ ಪ್ರಕಟಿಸಲಾಗಿದೆ. ಕೋವಿಡ್-19 ಎರಡನೇ ಅಲೆ ಹಾಗೂ ಲಾಕ್ ಡೌನ್ ಕಾರಣದಿಂದ ಈ ಬಾರಿ ಪರೀಕ್ಷೆ ರದ್ದುಗೊಂಡ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿತ್ತು. ಬಳಿಕ ಪರ್ಯಾಯ ಮೌಲ್ಯಮಾಪನ ನೀತಿಯಡಿ ಸಿದ್ದಪಡಿಸಲಾಗಿರುವ ಫಲಿತಾಂಶವನ್ನು ಮಂಡಳಿ ಇಂದು ಪ್ರಕಟಿಸಿದೆ.
57 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದರೆ, 2 ಲಕ್ಷ ವಿದ್ಯಾರ್ಥಿಗಳು ಶೇಕಡಾ 90 ರಿಂದ 95ರಷ್ಟು ಫಲಿತಾಂಶ ದಾಖಲಿಸಿದ್ದಾರೆ. 16 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶ ಪ್ರಕ್ರಿಯೆ ಹಂತದಲ್ಲಿದೆ. ಈ ವರ್ಷ ಮೆರಿಟ್ ಘೋಷಣೆ ಇರುವುದಿಲ್ಲ.
ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ https://bit.ly/3ikdkPl, https://bit.ly/3lDJ1Fp, ಅಥವಾ https://bit.ly/2TOxZBo ಲಿಂಕ್ ಗಳನ್ನು ಬಳಸಿ ವೀಕ್ಷಿಸಬಹುದು ಎಂದು ಮಂಡಳಿ ಪ್ರಕಟಣೆ ತಿಳಿಸಿದೆ.
0 comments:
Post a Comment