ಬೆಂಗಳೂರು, ಸೆಪ್ಟಂಬರ್ 17, 2021 (ಕರಾವಳಿ ಟೈಮ್ಸ್) : ಆಗಸ್ಟ್ ತಿಂಗಳ ಅಂತ್ಯ ಹಾಗೂ ಸೆಪ್ಟೆಂಬರ್ ತಿಂಗಳ ಆರಂಭದಲ್ಲಿ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದ ಖಾಸಗಿ ಅಭ್ಯರ್ಥಿಗಳು, ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಸೆಪ್ಟಂಬರ್ 20 ರಂದು ಸೋಮವಾರ (ನಾಳೆ) ಬೆಳಿಗ್ಗೆ 10.30ಕ್ಕೆ ಪ್ರಕಟಗೊಳ್ಳಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖಾ ನಿರ್ದೇಶಕರು ತಿಳಿಸಿದ್ದಾರೆ.
ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೆ. 20 ರಂದು ಬೆಳಿಗ್ಗೆ 10.30ಕ್ಕೆ ಪ್ರಕಟಿಸಲಿದ್ದು, ವಿದ್ಯಾರ್ಥಿಗಳು https://krrresults.nic.in ವೆಬ್ ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದು.
0 comments:
Post a Comment