ನವದೆಹಲಿ, ಸೆಪ್ಟೆಂಬರ್ 18, 2021 (ಕರಾವಳಿ ಟೈಮ್ಸ್) : ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಕೇಂದ್ರ ಸರಕಾರ 2022ರ ಮಾರ್ಚ್‌ವರೆಗೆ ವಿಸ್ತರಿಸಿದೆ.
ಕೋವಿಡ್-19 ವೈರಸ್ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ಆಧಾರ್ ಕಾರ್ಡ್-ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನಿಗದಿಪಡಿಸಲಾಗಿದ್ದ ಕೊನೆ ದಿನಾಂಕ ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ತಿಳಿಸಿದೆ.
ಅಲ್ಲದೆ, ಐ-ಟಿ ಕಾಯಿದೆಯಡಿ ದಂಡ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30, 2021 ರಿಂದ ಮಾರ್ಚ್ 31, 2022 ರವರೆಗೆ ವಿಸ್ತರಿಸಲಾಗಿದೆ.
ಬೇನಾಮಿ ಆಸ್ತಿ ವಹಿವಾಟು ನಿಷೇಧ ಕಾಯ್ದೆ 1988ರ ಅಡಿಯಲ್ಲಿ ಅಧಿಸೂಚನೆ ಪ್ರಾಧಿಕಾರದಿಂದ ಸೂಚನೆ ನೀಡುವ ಮತ್ತು ಆದೇಶವನ್ನು ರವಾನಿಸುವ ಸಮಯದ ಮಿತಿಯನ್ನು ಮಾರ್ಚ್ 2022 ಕ್ಕೆ ವಿಸ್ತರಿಸಲಾಗಿದೆ.
0 comments:
Post a Comment