ಬಂಟ್ವಾಳ, ಸೆಪ್ಟೆಂಬರ್ 03, 2021 (ಕರಾವಳಿ ಟೈಮ್ಸ್) : ತಾಲೂಕಿನ ನಾವೂರು ಸಮೀಪದ ಅಗ್ರಹಾರ ಎಂಬಲ್ಲಿ ಶುಕ್ರವಾರ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ನಾವೂರು ಸಮೀಪದ ಸುಲ್ತಾನ್ ನಗರ ನಿವಾಸಿ ಅಬ್ಬಾಸ್ (60) ಮೃತಪಟ್ಟಿದ್ದಾರೆ.
ಅಗ್ರಹಾರ ಮಸೀದಿ ಎದುರಿನಲ್ಲಿ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಅಬ್ಬಾಸ್ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
0 comments:
Post a Comment