ಬೆಂಗಳೂರು, ಸೆಪ್ಟಂಬರ್ 17, 2021 (ಕರಾವಳಿ ಟೈಮ್ಸ್) : 2021ರ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ನಾಳೆ (ಸೆಪ್ಟೆಂಬರ್ 20 ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎಸ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಆಗಸ್ಟ್ 28, 29 ಹಾಗೂ 30ರಂದು ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಈ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆ ನಡೆದಿತ್ತು.
ಸೋಮವಾರ ಸಂಜೆ 4 ಗಂಟೆಯ ಬಳಿಕ https://cetonline.karnataka.gov.in/kea ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
0 comments:
Post a Comment