ಸೆಪ್ಟೆಂಬರ್ 20 ರಂದು ಸಿಇಟಿ ಫಲಿತಾಂಶ : ಬೆಂಗಳೂರಿನಲ್ಲಿ ಫಲಿತಾಂಶ ದಿನಾಂಕ ಘೋಷಿಸಿದ ಸಚಿವ ಅಶ್ವತ್ಥನಾರಾಯಣ - Karavali Times ಸೆಪ್ಟೆಂಬರ್ 20 ರಂದು ಸಿಇಟಿ ಫಲಿತಾಂಶ : ಬೆಂಗಳೂರಿನಲ್ಲಿ ಫಲಿತಾಂಶ ದಿನಾಂಕ ಘೋಷಿಸಿದ ಸಚಿವ ಅಶ್ವತ್ಥನಾರಾಯಣ - Karavali Times

728x90

3 September 2021

ಸೆಪ್ಟೆಂಬರ್ 20 ರಂದು ಸಿಇಟಿ ಫಲಿತಾಂಶ : ಬೆಂಗಳೂರಿನಲ್ಲಿ ಫಲಿತಾಂಶ ದಿನಾಂಕ ಘೋಷಿಸಿದ ಸಚಿವ ಅಶ್ವತ್ಥನಾರಾಯಣ

 ಬೆಂಗಳೂರು, ಸೆಪ್ಟೆಂಬರ್ 03, 2021 (ಕರಾವಳಿ ಟೈಮ್ಸ್) : ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಸೆಪ್ಟೆಂಬರ್ 20ರಂದು ಪ್ರಕಟಿಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ ಬೆಂಗಳೂರಿನಲ್ಲಿ ಫಲಿತಾಂಶ ದಿನಾಂಕ ಘೋಷಿಸಿದ್ದಾರೆ. 

ಮಾಧ್ಯಮ ಪ್ರತಿ£ಧಿಗಳ ಜತೆ ಮಾತನಾಡಿದ ಅವರು, ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು ಎಂದವರು ಭರವಸೆ ನೀಡಿದರು. 

ಸರಿಯಾದ ಸಮಯಕ್ಕೆ ಫಲಿತಾಂಶ ಘೋಷಣೆ ಸಹಿತ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.  

ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಇದೇ ವೇಳೆ ಪ್ರತಿಕ್ರಿಯೆ ನೀಡಿದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಈ ಬಗ್ಗೆ ಮುಂದಿನ ವಾರ ಸಭೆ ನಡೆಸಿ ವಿದ್ಯಾರ್ಥಿಗಳ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 

ಖಾಸಗಿ ಪದವಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ಇದೇ ವೇಳೆ ಸಚಿವರ ಪ್ರತ್ರಿಕ್ರಿಯೆ ಬಯಸಿದಾಗ, “ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣ ಮಟ್ಟದ ಶಿಕ್ಷಣ ಕೊಡುವುದಷ್ಟೇ ಸರಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಗಮನ ಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು. 

ವಿದ್ಯಾರ್ಥಿಗಳು ಸರಕಾರೀ ಕಾಲೇಜುಗಳಲ್ಲೇ ದಾಖಲಾಗಬೇಕು. ಅಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗೆ ಕ್ರಮ ವಹಿಸಲಾಗುವುದು ಎಂದವರು ಹೇಳಿದರು. 

ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಸಚಿವರು, ಪದವಿ ಕಾಲೇಜುಗಳಿಗೆ ಅಕ್ಟೋಬರ್ 1ರವರೆಗೂ ದಾಖಲಾತಿಗೆ ಅವಕಾಶ ಇದೆ ಎಂದು ಸಚಿವರು ತಿಳಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಸೆಪ್ಟೆಂಬರ್ 20 ರಂದು ಸಿಇಟಿ ಫಲಿತಾಂಶ : ಬೆಂಗಳೂರಿನಲ್ಲಿ ಫಲಿತಾಂಶ ದಿನಾಂಕ ಘೋಷಿಸಿದ ಸಚಿವ ಅಶ್ವತ್ಥನಾರಾಯಣ Rating: 5 Reviewed By: karavali Times
Scroll to Top