ವಿಟ್ಲ, ಸೆಪ್ಟೆಂಬರ್ 21, 2021 (ಕರಾವಳಿ ಟೈಮ್ಸ್) : ಜನರಿಗೆ ನೆಮ್ಮದಿ ಮರಳಿ ಬರಲು ಕಾಂಗ್ರೆಸ್ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಿದೆ ಎಂದು ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.
ವಿಟ್ಲ - ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆಗಳ ವಿರುದ್ಧ ವಿಟ್ಲ ಪಟ್ಟಣ ಪಂಚಾಯಿತ್ ಮುಂಭಾಗದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ನಂದಿಕೂರಿನಿಂದ ಕಾಸರಗೋಡಿಗೆ ಹೋಗಲು ಸಮುದ್ರ ಬದಿಯಲ್ಲಿ ನೇರ ದಾರಿ ಇದ್ದರೂ, ಕೃಷಿಕರಿಗೆ ತೊಂದರೆ ಮಾಡುವ ನಿಟ್ಟಿನಲ್ಲಿ ವಿಟ್ಲ, ವೀರಕಂಬ, ಕೇಪು ಭಾಗದಲ್ಲಿ ವಿದ್ಯುತ್ ಮಾರ್ಗದ ಯೋಜನೆ ರೂಪಿಸಲಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರಗಳು ಸಂಪೂರ್ಣ ವಿಫಲವಾಗಿದೆ ಎಂದರು.
ವಿಟ್ಲ - ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ. ಬಿ. ಮಾತನಾಡಿ ವಿವಿಧ ಉತ್ಪನ್ನಗಳ ಬೆಲೆ ಏರಿಕೆಗಳು ದೇಶದಲ್ಲಿ ಯಾವ ರೀತಿಯ ಅಚ್ಛೇದಿನ್ ನಿರ್ಮಾಣ ಮಾಡಿದೆ ಜಮೀನ್ದಾರೀ ಪದ್ದತಿಯನ್ನು ಮತ್ತೆ ಜಾರಿಗೆ ತರುವ ಕಾರ್ಯಕ್ಕೆ ಬಿಜೆಪಿ ಕೈ ಹಾಕಿದೆ ಎಂದು ಆರೋಪಿಸಿದರು.
ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಎಂ. ಎಸ್. ಮಹಮ್ಮದ್, ಡಿ.ಸಿ.ಸಿ. ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಮಾತನಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸೋಮನಾಥ ಉಪ್ಪಿನಂಗಡಿ, ಜಿಲ್ಲಾ ಹಿಂದುಳಿತ ವರ್ಗಗಳ ಸಂಯೋಜಕ ಅಶೋಕ್ ಡಿ' ಸೋಜ, ವಿಟ್ಲ ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಕರೀಂ ಕುದ್ದುಪದವು, ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ, ಕುಳ ಬೂತ್ ಅಧ್ಯಕ್ಷ ನಾಸಿರ್ ಕೋಲ್ಪೆ, ಹಿಂದುಳಿತ ವರ್ಗಗಳ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕಿಸಾನ್ ಘಟಕ ಅಧ್ಯಕ್ಷ ಎಳ್ಯಣ್ಯ ಪೂಜಾರಿ, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ರಾಮಣ್ಣ ಪಿಲಿಂಜ, ಅಸಂಘಟಿತ ಕಾರ್ಮಿಕರ ಅಧ್ಯಕ್ಷ ಸೇಸಪ್ಪ ನೆಕ್ಕಿಲು, ಕಾರ್ಮಿಕ ಘಟಕ ಅಧ್ಯಕ್ಷ ಶ್ರೀನಿವಾಸ ಶೆಟ್ಟಿ ಕೊಲ್ಯ, ಉಪ್ಪಿನಂಗಡಿ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸಿಫ್, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸದಸ್ಯ ಪದ್ಮನಾಭ ಪೂಜಾರಿ ಸಣ್ಣಗುತ್ತು, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಸದಸ್ಯ ರಾಜೇಂದ್ರನಾಥ ರೈ ಪೆರುವಾಯಿ, ಮಾಜಿ ಅಧ್ಯಕ್ಷ ರಾಲ್ಫ್ ಡಿಸೋಜ, ಸೀತಾರಾಮ ಶೆಟ್ಟಿ ಮುಳಿಯ, ಪಂಚಪಾಲ ಶೆಟ್ಟಿ ಪೆರುವಾಯಿ, ಬಾಲಕೃಷ್ಣ ಬೇಂಗ್ರೋಡಿ, ಶ್ರೀಧರ ಶೆಟ್ಟಿ ಪುಣಚ, ಮಾಣಿಲ ಗ್ರಾಮ ಪಂಚಾಯಿತಿ ಸದಸ್ಯ ಶ್ರೀಧರ ಬಾಳೆಕಲ್ಲು, ಬಲ್ನಾಡು ವಲಯ ಅಧ್ಯಕ್ಷ ಚಂದಪ್ಪ ಪೂಜಾರಿ, ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಗೌಡ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಹಸೈನಾರ್ ನೆಲ್ಲಿಗುಡ್ಡೆ, ಸುನಿತಾ ಕೋಟ್ಯಾನ್ ಪ್ರಮುಖರಾದ ಅಸ್ಗರ್ ಅಲಿ, ಅಬ್ದುರ್ರಹ್ಮಾನ್ ಯುನಿಕ್, ಖಲಂದರ್ ಶಾಫಿ ನೆಕ್ಕಿಲಾಡಿ, ಪ್ರಹ್ಲಾದ್ ನೆಕ್ಕಿಲಾಡಿ, ಮೋಹನ್ ಗೌಡ ಕೊಡಿಂಬಾಡಿ, ಜಯಪ್ರಕಾಶ್ ಬದಿನಾರು ಯು.ಎಸ್. ಉಮ್ಮರ್ ಕಲ್ಲಂದಡ್ಕ,ಎಂ.ಕೆ.ಮೂಸಾ, ಸಂಶುದ್ದೀನ್ ಪುಣಚ, ಅರ್ಷದ್ ಕುಕ್ಕಿಲ, ಶೇಖ್ ಅಲಿ ಸೇರಾಜೆ ಮೊದಲಾದವರು ಪ್ರತಿಭಟನೆಯ ನೆತೃತ್ವ ವಹಿಸಿದ್ದರು.
0 comments:
Post a Comment