ಬಂಟ್ವಾಳ, ಸೆಪ್ಟಂಬರ್ 25, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪಾಣೆಮಂಗಳೂರು ಸಮೀಪದ ಮೆಲ್ಕಾರ್-ಗುಡ್ಡೆಅಂಗಡಿ ನಿವಾಸಿ ಮುಹಮ್ಮದ್ ಇರ್ಶಾದ್ ಗುಡ್ಡೆಅಂಗಡಿ ಅವರನ್ನು ನೇಮಕಗೊಳಿಸಿ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಎಸ್ ರಕ್ಷಾ ರಾಮಯ್ಯ ಆದೇಶ ಹೊರಡಿಸಿದ್ದಾರೆ.
ಮಾಜಿ ಸಚಿವ, ಬಿ ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು ಅವರ ಸೂಚನೆ ಮೇರೆಗೆ ಈ ನೇಮಕ ಆದೇಶ ಹೊರಡಿಸಲಾಗಿದೆ.
0 comments:
Post a Comment