ಬೆಂಗಳೂರು, ಸೆಪ್ಟಂಬರ್ 19, 2021 (ಕರಾವಳಿ ಟೈಮ್ಸ್) : ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಆಶ್ಲೀಲ ವೀಡಿಯೋಗೆ ಸಂಬಂಧಿಸಿದಂತೆ ಟ್ವಿಟರ್ ಮೂಲಕ ಪ್ರತಿಕ್ರಯಿಸಿರುವ ಕೇಂದ್ರದ ಮಾಜಿ ಸಚಿವ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಅವರು ತನ್ನನ್ನು ಹೋಲುವ ನಕಲಿ ವೀಡಿಯೋ ಒಂದನ್ನು ಸೃಷ್ಟಿಸಿ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡಿರುವುದು ಗಮನಕ್ಕೆ ಬಂದಿದೆ. ಆದರೆ ವೀಡಿಯೋದಲ್ಲಿರುವ ವ್ಯಕ್ತಿ ನಾನಲ್ಲ. ನನ್ನ ತೇಜೋವಧೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದಿದ್ದಾರೆ.
ಈ ಬಗ್ಗೆ ಸೈಬರ್ ಅಪರಾಧ ವಿಭಾಗಕ್ಕೆ ದೂರು ಸಲ್ಲಿಸಿದ್ದೇನೆ ಈ ಕೆಲಸ ಮಾಡಿದ ಕಿರಾತಕರ ಬಂಧಿಸಲಾಗುತ್ತದೆ ಎನ್ನುವ ನಂಬಿಕೆ ಇದೆ ಎಂದವರು ತಿಳಿಸಿದ್ದಾರೆ.
ನ್ಯಾಯಾಲಯದ ಆದೇಶದಂತೆ ಈ ವಿಡಿಯೋ ಅಪ್ ಲೋಡ್ ಮಾಡುವುದು ಮತ್ತು ಫಾರ್ವರ್ಡ್ ಮಾಡುವುದು ಕೂಡಾ ಶಿಕ್ಷಾರ್ಹ ಅಪರಾಧವಾಗುತ್ತದೆ. ಇಂಥ ಕೃತ್ಯದಲ್ಲಿ ಯಾರಾದಾರೂ ತೊಡಗಿದ್ದು ಕಂಡರೆ ನನಗೆ ಮಾಹಿತಿ ನೀಡಿ ಎಂದು ಮಾಜಿ ಸಿಎಂ ಕೇಳಿಕೊಂಡಿದ್ದಾರೆ.
0 comments:
Post a Comment