ಮಂಗಳೂರು, ಸೆಪ್ಟಂಬರ್ 04, 2021 (ಕರಾವಳಿ ಟೈಮ್ಸ್) : ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನ ಉಚಿತ/ ರಿಯಾಯಿತಿ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಆನ್ ಲೈನ್ ಪೆÇೀರ್ಟಲ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಯಲ್ಲಿ ಆಧಾರ್, ಮೊಬೈಲ್ ಸಂಖ್ಯೆ ಹಾಗೂ ಅರ್ಜಿಗೆ ಸಂಬಂಧಪಟ್ಟ ದಾಖಲೆ ಹಾಗೂ ಜೆಪಿಜೆ ಮಾದರಿಯಲ್ಲಿರುವ ಭಾವಚಿತ್ರ ಅಪ್‍ಲೋಡ್ ಮಾಡುವುದು ಕಡ್ಡಾಯ. 1ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಸ್ಯಾಟ್ಸ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಪಿಯುಸಿ ಮೇಲ್ಪಟ್ಟ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ದೃಢೀಕರಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ.
ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಬಳಿಕ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವ ಸಂದರ್ಭ ಆನ್ ಲೈನ್ ಅರ್ಜಿಯ ಸ್ವೀಕೃತಿ, ಅಗತ್ಯ ದಾಖಲೆಗಳ ಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿ ಹಾಗೂ 2 ಭಾವಚಿತ್ರಗಳನ್ನು ಸಲ್ಲಿಸತಕ್ಕದ್ದು ಎಂದು ಕೆಎಸ್ಸಾರ್ಟಿಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.
0 comments:
Post a Comment