ಬಂಟ್ವಾಳ, ಸೆಪ್ಟಂಬರ್ 13, 2021 (ಕರಾವಳಿ ಟೈಮ್ಸ್) : ತಾಲೂಕಿನ ಸಜಿಪಮೂಡ ಗ್ರಾಮದ ಕೋಯಮಜಲು ಬಳಿ ಭಾನುವಾರ ರಾತ್ರಿ ಸ್ಕೂಟರ್ ಡಿಕ್ಕಿ ಹೊಡೆದು ಪಾದಚಾರಿ ಕೃಷ್ಣಮೂರ್ತಿ ಅವರು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ವೇಳೆಗೆ ಮಂಗಳೂರು ವೆನ್‍ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಭಾನುವಾರ ರಾತ್ರಿ ಸುಮಾರು 9.30 ಗಂಟೆ ವೇಳೆ ಸಜಿಪಮೂಡ ಗ್ರಾಮದ ಕೋಯಮಜಲು ಬಳಿ ಪಾದಚಾರಿ ಕೃಷ್ಣಮೂರ್ತಿ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್ ಸವಾರ ರೋಹಿತ್ ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಮಾಡುತ್ತಾ ಬಂದು ಡಿಕ್ಕಿ ಹೊಡೆದ ಪರಿಣಾಮ ಕೃಷ್ಣಮೂರ್ತಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿರುತ್ತಾರೆ. ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ತಡ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮೃತಪಟ್ಟಿದ್ದಾರೆ.
ಘಟನೆಗೆ ಸ್ಕೂಟರ್ ಸವಾರ ರೋಹಿತ್ ಅವರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ಈ ಬಗ್ಗೆ ಚೇತನ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 93/2021 ಕಲಂ 279, 337, 304(ಎ) ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment