ಬೆಳ್ತಂಗಡಿ, ಸೆಪ್ಟಂಬರ್ 18, 2021 (ಕರಾವಳಿ ಟೈಮ್ಸ್) : ತಾಲೂಕಿನ ಕುವೆಟ್ಟು ಗ್ರಾಮದ ಸಬರಬೈಲು ಬಳಿ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪಿಎಸ್ಸೈ ನಂದಕುಮಾರ್ ನೇತೃತ್ವದ ಪೊಲೀಸರು ದ್ವಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ್ದು, ಆರೋಪಿಗಳಾದ ಮದ್ದಡ್ಕದ ಚಿಲಿಂಬಿ ನಿವಾಸಿಗಳಾದ ಮಹಮ್ಮದ್ ರಫೀಕ್ (35) ಹಾಗೂ ನೌಪಾಲ್(25) ಅವರನ್ನು ಗಾಂಜಾ ಸಹಿತ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಶುಕ್ರವಾರ (ಸೆ 17) ಸಂಜೆ 7 ಗಂಟೆ ವೇಳೆಗೆ ಬೆಳ್ತಂಗಡಿ ಪಿಎಸ್ಸೈ ನಂದಕುಮಾರ್ ಅವರು ಠಾಣಾ ಸಿಬ್ಬಂದಿಗಳೊಂದಿಗೆ ವಾಹನ ತಪಾಸಣೆ ನಡೆಸುತ್ತಿರುವ ವೇಳೆ ಪೂಂಜಾಲಕಟ್ಟೆ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಟಿವಿಎಸ್ ವೇಗೋ ಮೋಟಾರ್ ಸೈಕಲ್ ನಿಲ್ಲಿಸಿ ಪರಿಶೀಲಿಸಿದಾಗ ಈ ಅಕ್ರಮ ಗಾಂಜಾ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳು ಸಾಗಿಸುತ್ತಿದ್ದ 45,850/- ರೂಪಾಯಿ ಮೌಲ್ಯದ ಒಟ್ಟು 1,310 ಗ್ರಾಂ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ ಮೋಟಾರ್ ಸೈಕಲನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 71/2021 ಕಲಂ 8(ಸಿ) ಜೊತೆಗೆ 20(ಬಿ)(11) ಎನ್ ಡಿ ಪಿ ಎಸ್ ಆಕ್ಟ್ 1985 ರಂತೆ ಪ್ರಕರಣ ದಾಖಲಾಗಿದೆ.
0 comments:
Post a Comment