ಬಂಟ್ವಾಳ, ಅಕ್ಟೋಬರ್ 09, 2021 (ಕರಾವಳಿ ಟೈಮ್ಸ್) : ಕಾರಿನಲ್ಲಿ ಬಂದ 5 ಮಂದಿ ದುಷ್ಕರ್ಮಿಗಳು ಅಪ್ರಾಪ್ತ ಶಾಲಾ ಬಾಲಕಿಯನ್ನು ಅಪಹರಿಸಿ ಸರಣಿ ಅತ್ಯಾಚಾರ ನಡೆಸಿರುವ ಬಗ್ಗೆ ಸ್ವತಃ ಬಾಲಕಿಯ ಹೇಳಿಕೆ ಆಧರಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಟೋಬರ್ 8 ರಂದು ಬೆಳಿಗ್ಗೆ 7 ಗಂಟೆಗೆ ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವುದಾಗಿ ಬಾಲಕಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾದ ಪ್ರಕಾರ ಆಸ್ಪತ್ರೆಯ ಇಂಟಿಮೇಶನ್ ಆಧರಿಸಿ ಬಳಿಕ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ ಬಾಲಕಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈ ಬಗ್ಗೆ ಬಾಲಕಿ ನೀಡಿರುವ ಹೇಳಿಕೆಯಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 116/2021 ಕಲಂ 366 (ಎ), 376(ಡಿ), 506 ಐಪಿಸಿ ಮತ್ತು ಕಲಂ 04, 06 ಪೆÇೀಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದು, ಪ್ರಕರಣದಲ್ಲಿ 5 ಮಂದಿ ಆರೋಪಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಆರೋಪಿಗಳ ಪತ್ತೆ ಬಲೆ ಬೀಸಲಾಗಿದೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
0 comments:
Post a Comment