ಬಂಟ್ವಾಳ, ಅಕ್ಟೋಬರ್ 09, 2021 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಶುಕ್ರವಾರ ನಡೆದ ಶಾಲಾ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಕ್ಷಣ ಕಾರ್ಯಪ್ರವೃತ್ತರಾದ ಬಂಟ್ವಾಳ ಪೊಲೀಸರು ಇಬ್ಬರು ಅತ್ಯಾಚಾರ ಆರೋಪಿಗಳ ಸಹಿತ ಒಟ್ಟು ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಾಲಕಿಗೆ ಪರಿಚಿತನಾಗಿರುವ ಶರತ್ ಶೆಟ್ಟಿ ಇತರ ನಾಲ್ಕು ಮಂದಿ ಆರೋಪಿಗಳ ಜೊತೆ ಸೇರಿಕೊಂಡು ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಿಳಿ ಕಾರಿನಲ್ಲಿ ಬಂದು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿರುವುದಾಗಿ ಬಾಲಕಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾದ ಪ್ರಕಾರ ಆಸ್ಪತ್ರೆಯ ಇಂಟಿಮೇಶನ್ ಆಧರಿಸಿ ಬಳಿಕ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ ಬಾಲಕಿಯನ್ನು ಪೊಲೀಸರು ವಿಚಾರಣೆ ನಡೆಸಿದ ಬಳಿಕ ನಡೆಸಿದ ಕಾರ್ಯಾಚರಣೆಯಲ್ಲಿ ಪರಿಚಿತ ಆರೋಪಿ ಶರತ್ ಶೆಟ್ಟಿ ಸಹಿತ ನಾಲ್ಕು ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಇಡೀ ಪ್ರಕರಣವನ್ನು ಶೀಘ್ರದಲ್ಲೇ ಸ್ಪಷ್ಟವಾಗಿ ಬೇಧಿಸಲಾಗುವುದು ಎಂದು ಜಿಲ್ಲಾ ಎಸ್ಪಿ ಋಷಿಕೇಶ್ ಸೊನಾವಣೆ ಭಗವಾನ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment