ಬಂಟ್ವಾಳ, ಸೆಪ್ಟಂಬರ್ 30, 2021 (ಕರಾವಳಿ ಟೈಮ್ಸ್) : ನರೇಂದ್ರ ಮೋದಿ ಆಡಳಿತದಲ್ಲಿ ಭಾರತ ಎಲ್ಲ ರಂಗದಲ್ಲೂ ಅಭಿವೃದ್ಧಿಯನ್ನು ಕಾಣುತ್ತಿದ್ದು, ಆರ್ಥಿಕ ಸ್ವಾವಲಂಬಿತನವೂ ಹೆಚ್ಚಾಗಿ ಆತ್ಮನಿರ್ಭರ ಭಾರತ ಸೃಷ್ಟಿಯಾಗುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ಆಜಾದಿ ಕಾ ಸುವರ್ಣ ಮಹೋತ್ಸವದ ಪ್ರಯುಕ್ತ ರಾಷ್ಟ್ರೀಕೃತ, ಖಾಸಗಿ, ಸ್ಥಳೀಯ ಬ್ಯಾಂಕ್ ಗಳು, ನಬಾರ್ಡ್ ಹಾಗೂ ಇನ್ನಿತರ ಸಹಕಾರಿ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಕೂಟ್ಲುವಿನ ಬಂಟವಾಳದ ಬಂಟರ ಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಈ ಹಿಂದಿನ ಸರಕಾರಗಳು ನಾಗರಿಕರ ಅವಶ್ಯಕತೆಗಳನ್ನು ಗುರುತಿಸುವಲ್ಲಿ, ಜನರ ಸಹಭಾಗಿತ್ವ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದರಿಂದ ಬ್ಯಾಂಕಿಂಗ್ ಕ್ಷೇತ್ರ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ ಎಂದರು.
ದೇಶದಲ್ಲಿ 12 ಕೋಟಿ ಮನೆಗಳಿಗೆ ಶೌಚಾಲಯ ಒದಗಿಸಲಾಗಿದ್ದರೆ, ಸುಮಾರು 16 ಕೋಟಿ ರೈತರು ಯೋಜನೆಗಳ ಲಾಭ ಪಡೆದಿದ್ದಾರೆ ಎಂದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,95,606 ಮಂದಿ ಮುದ್ರಾ ಯೋಜನೆಯ ಲಾಭ ಪಡೆದಿದ್ದಾರೆ. ಬೀದಿ ವ್ಯಾಪಾರಿಗಳ ಸಹಿತ ಹಲವರಿಗೆ ಸಾಲ, ಸೌಲಭ್ಯಗಳು ದೊರಕಿವೆ ಎಂದರು. ಕೇವಲ ಮೂಲಭೂತ ಸೌಕರ್ಯಗಳಿಂದ ಮಾತ್ರ ಅಭಿವೃದ್ದಿ ಸಾಧ್ಯವಿಲ್ಲ, ಜೊತೆಗೆ ಶಿಕ್ಷಣ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಯೂ ಆದಾಗ ಅಭಿವೃದ್ದಿಗೆ ಅರ್ಥ ಬರುತ್ತದೆ. ಇದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಕಾರ್ಯರೂಪಕ್ಕೆ ಬರುತ್ತಿದೆ ಎಂದರು.
ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ, ಶಾಸಕರಾದ ಸಂಜೀವ ಮಠಂದೂರು, ಡಾ ಭರತ್ ಶೆಟ್ಟಿ, ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಆಯುಕ್ತ ಅಕ್ಷಯ್ ಶ್ರೀಧರ್, ಜಿ ಪಂ ಸಿಇಒ ಡಾ ಕುಮಾರ್, ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್, ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್ ಆರ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಅಲೆಮಾರಿ-ಆರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ ದೇವದಾಸ ಶೆಟ್ಟಿ, ನಬಾರ್ಡ್ ಡಿಡಿಎಂ ಸಂಗೀತಾ ಎಸ್ ಕರ್ತ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್, ವಿವಿಧ ಬ್ಯಾಂಕ್ ಅಧಿಕಾರಿಗಳಾದ ಯೋಗೀಶ್ ಆಚಾರ್ಯ, ಗಾಯತ್ರಿ, ರಾಜೇಶ್ ಗುಪ್ತಾ, ವಿನಯ ಭಟ್ ವಿ ಜೆ, ಸೂರ್ಯನಾರಾಯಣ, ಅಮಿತ್ ಕುಮಾರ್, ಶ್ರೀಕಾಂತ್ ಕೆ, ದಾಮೋದರ, ಮಹೇಶ್, ಮೊದಲಾದವರು ಉಪಸ್ಥಿತರಿದ್ದರು.
ಲೀಡ್ ಬ್ಯಾಂಕ್ ಮೇನೇಜರ್ ಪ್ರವೀಣ್ ಎಂ ಪಿ ಸ್ವಾಗತಿಸಿ, ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಪ್ರಸ್ತಾವನೆಗೈದರು. ಡಾ ಶಿವಪ್ರಕಾಶ್, ಐರಿನ್ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ ವಿವಿಧ ಯೋಜನೆಯಡಿ ಸಾಲ ಮಂಜೂರಾತಿ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಬ್ಯಾಂಕ್ ಯೋಜನೆಗೆ ಸಂಬಂಧಪಟ್ಟಂತೆ ವಿವಿಧ ಪ್ರದರ್ಶನ ಮಳಿಗೆ ಹಾಗೂ ಮಹಿಳಾ ಮತ್ತು ಮಕ್ಳಳ ಅಭಿವೃದ್ಧಿ ಇಲಾಖೆ, ತೋಟಗಾರಿ ಸಹಿತ ವಿವಿಧ ಇಲಾಖೆಗೆ ಸಂಬಂಧಿಸಿದ ಮಾರಾಟ ಮತ್ತು ಪ್ರದರ್ಶನಗಳನ್ನು ಏರ್ಪಡಿಸಲಾಗಿತ್ತು. ಬ್ಯಾಂಕ್ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮ ಆರಂಭಕ್ಕೂ ಮುಂಚಿತವಾಗಿ ಅಕಾಲಿಕವಾಗಿ ನಿಧನರಾದ ಯುವ ಚಿತ್ರನಟ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು.
0 comments:
Post a Comment