ಬಂಟ್ವಾಳ, ಅಕ್ಟೋಬರ್ 12, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಇಕ್ಬಾಲ್ ಸುಜೀರ್ ಅವರನ್ನು ನೇಮಿಸಲಾಗಿದೆ.
ಮಂಗಳೂರು ಶಾಸಕ ಯು ಟಿ ಖಾದರ್ ಅವರ ಶಿಫಾರಸ್ಸಿನಂತೆ, ಜಿ ಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಅವರ ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್ ಅವರು ಈ ನೇಮಕ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಮಂಗಳೂರು-ಮಲ್ಲಿಕಟ್ಟೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಕ್ಬಾಲ್ ಸುಜೀರ್ ಅವರಿಗೆ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್ ಅವರು ನೇಮಕ ಆದೇಶ ಪತ್ರ ಹಸ್ತಾಂತರಿಸಿದರು. ಈ ಸಂದರ್ಭ ಜಿ ಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾ ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಂತಿಯಾಝ್ ತುಂಬೆ, ಉಪಾಧ್ಯಕ್ಷ ಮಜೀದ್ ಪೇರಿಮಾರ್, ಕೆ ಎಂ ಅಶ್ರಫ್ ಮಲ್ಲಿ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment