ಬಂಟ್ವಾಳ, ಅಕ್ಟೋಬರ್ 12, 2021 (ಕರಾವಳಿ ಟೈಮ್ಸ್) : ದೇಶದಲ್ಲಿ ಜನರ ಆರೋಗ್ಯದ ಬಗ್ಗೆ ವಿಶೇಷ ಆದ್ಯತೆ ನೀಡುತ್ತಿರುವ ಅಂತರ್ ರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ 9 ಲಕ್ಷ ರೂಪಾಯಿ ವೆಚ್ಚದಲ್ಲಿ ಎರಡು ಡಯಾಲಿಸಿಸ್ ಯಂತ್ರ ಹಸ್ತಾಂತರಿಸಿದೆ ಎಂದು ಲಯನ್ಸ್ ನಿಕಟಪೂರ್ವ ಜಿಲ್ಲಾ ಗವರ್ನರ್ ಡಾ ಗೀತಪ್ರಕಾಶ್ ಹೇಳಿದರು.
ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಬಳಿಕ ಬಿ ಸಿ ರೋಡಿನ ಲಯನ್ಸ್ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಪಿಸಿಯೋಥೆರಪಿ ಮತ್ತು ಸಂಚಾರಿ ಡಯಾಲಿಸಿಸ್ ಘಟಕ ಅಳವಡಿಸುವ ಬಗ್ಗೆಯೂ ಸಿದ್ಧತೆ ನಡೆದಿದೆ ಎಂದರು.
ಜಿಲ್ಲಾ ಗವರ್ನರ್ ವಸಂತ ಕುಮಾರ್ ಶೆಟ್ಟಿ, ನಿಯೋಜಿತ ಗವರ್ನರ್ ಸಂಜಿತ್ ಶೆಟ್ಟಿ, ಮಾಜಿ ಗವರ್ನರ್ ದೇವದಾಸ ಭಂಡಾರಿ, ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ ಪುಷ್ಪಲತಾ, ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ ವಸಂತ ಬಾಳಿಗಾ, ವಿಟ್ಲ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ, ಮಾಜಿ ಪ್ರಾಂತೀಯ ಅಧ್ಯಕ್ಷ ಸಂಜೀವ ಶೆಟ್ಟಿ, ಮಹಮ್ಮದ್ ಇಕ್ಬಾಲ್, ಮಂಗೇಶ್ ಭಟ್ ವಿಟ್ಲ, ಲೋಕೇಶ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment