ಬಂಟ್ವಾಳ, ಅಕ್ಟೋಬರ್ 02, 2021 (ಕರಾವಳಿ ಟೈಮ್ಸ್) : ಮಹಾತ್ಮಾ ಗಾಂಧೀಜಿ ಜನ್ಮದಿನಾಚರಣೆ ಪ್ರಯುಕ್ತ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಅವರ ನೇತೃತ್ವದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು ಬಿ ಸಿ ರೋಡು ಮಿನಿ ವಿಧಾನಸೌಧದಲ್ಲಿ ಸ್ವಚ್ಚತಾ ಕಾರ್ಯ ನಡೆಸಿದರು.
ಗಾಂಧಿ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಅವರು, ನಮ್ಮ ಪ್ರತಿ ಹೆಜ್ಜೆಯಲ್ಲಿ ಗಾಂಧೀಜಿಯ ತತ್ವಗಳನ್ನು ಅಳವಡಿಸಿಕೊಂಡು ಮುಂದೆ ಸಾಗಬೇಕು. ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಹೋರಾಡುವುದರ ಜೊತೆಗೆ ಭಾರತೀಯ ಸಮಾಜದಲ್ಲಿದ್ದ ಪಿಡುಗುಗಳನ್ನು ನಿವಾರಿಸಲು ಪ್ರಯತ್ನಿಸಿದರು ಎಂದರು.
ಈ ಸಂದರ್ಭ ತಾಲೂಕು ಕಚೇರಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರ ನಾಥ್ ಭಟ್ ಮಿತ್ತೂರು, ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಶಿರಸ್ತೇದಾರ್ ದಿವಾಕರ ಮುಗುಳಿಯ, ಪ್ರಭಾರ ಕಂದಾಯ ನಿರೀಕ್ಷಕರಾದ ಧರ್ಮ ಸಾಮ್ರಾಜ್ಯ, ಮಂಜುನಾಥ್ ಕೆ ಎಚ್, ಕುಮಾರ ಟಿ ಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು. ಚುನಾವಣೆ ಶಿರಸ್ತೇದಾರ್ ನವೀನ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.
0 comments:
Post a Comment