ಮಂಗಳೂರು, ಅಕ್ಟೋಬರ್ 21, 2021 (ಕರಾವಳಿ ಟೈಮ್ಸ್) : 2020ಸಾಲಿನ ಪದ್ಮಶ್ರೀ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಹರೇಕಳ ಹಾಜಬ್ಬ ಅವರಿಗೆ ನವೆಂಬರ್ 8 ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ದೆಹಲಿಯ ಅಶೋಕ್ ಹೋಟೆಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಈ ಗೌರವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಈ ಹಿಂದೆ 2020ರ ಗಣರಾಜ್ಯೋತ್ಸವ ಸಂದರ್ಭ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರಕಾರ ಘೋಷಣೆ ಮಾಡಿತ್ತು. ಅದೇ ವರ್ಷ ಮಾರ್ಚ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಬಳಿಕ ತಲೆದೋರಿದ ಕೊರೋನಾ ವೈರಲ್ ಹಾಗೂ ಲಾಕ್ ಡೌನ್ ಕಾರಣದಿಂದ ಪ್ರಶಸ್ತಿ ಪ್ರದಾನ ಮುಂದೂಡಲಾಗಿತ್ತು. ಇದೀಗ ಕೊರೋನಾ ನಿಯಂತ್ರಣಕ್ಕೆ ಬಂದ ಹಿನ್ನಲೆಯಲ್ಲಿ ನವಂಬರ್ 8 ರಂದು ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
0 comments:
Post a Comment