ಬೆಂಗಳೂರು, ಅಕ್ಟೋಬರ್ 10, 2021 (ಕರಾವಳಿ ಟೈಮ್ಸ್) : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಇನ್ನೂ ಕೆಲ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ. ಶನಿವಾರ ಬೆಳಿಗ್ಗಿನಿಂದಲೇ ಬೆಂಗಳೂರಿನಲ್ಲಿ ಸರಾಸರಿ 14.2 ಮಿ.ಮೀ ಮಳೆಯಾಗಿದ್ದು, ಇದೇ ಅವಧಿಯಲ್ಲಿ ಎಚ್‍ಎಎಲ್ ವಿಮಾನ ನಿಲ್ದಾಣದ ಸುತ್ತಮುತ್ತ 13.6 ಎಂಎಂ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 15 ಎಂಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಭಾಗದಲ್ಲಿ ಅಧಿಕ ಮಳೆಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
10 October 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment