ಬಂಟ್ವಾಳ, ಅಕ್ಟೋಬರ್ 12, 2021 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ಸಮೀಪದ ಮಿತ್ತಬೈಲು ಮುಹಿಯುದ್ದೀನ್ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ಎಸ್ ಕುಂಞÂಬಾವ (80) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ (ಅಕ್ಟೋಬರ್ 12) ಸ್ವಗೃಹದಲ್ಲಿ ನಿಧನರಾದರು.
ಅವರು ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ, ಸದಸ್ಯರಾಗಿ ಹಾಗೂ ಜಮಾಅತ್ ವ್ಯಾಪ್ತಿಯ ಹಲವು ಸÀಂಘ-ಸಂಸ್ಥೆಗಳ ಮಾರ್ಗದರ್ಶಕರಾಗಿ ಕೆಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಐದು ಮಂದಿ ಗಂಡು, ಐದು ಮಂದಿ ಹೆಣ್ಣು ಮಕ್ಕಳ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಎಸ್ ಕುಂಞಬಾವ ಅವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ ಎಚ್ ಖಾದರ್, ಮಿತ್ತಬೈಲು ಜುಮಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷ ಎಸ್ ಮುಹಮ್ಮದ್ ಸಾಗರ್ ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
0 comments:
Post a Comment