ದುಬೈ, ಅಕ್ಟೋಬರ್ 27, 2021 (ಕರಾವಳಿ ಟೈಮ್ಸ್) : ಇಲ್ಲಿನ ಮೈದಾನದಲ್ಲಿ ಮಂಗಳವಾರ ನಡೆದ ಟಿ-20 ವಿಶ್ವಕಪ್ ಟೂರ್ನಿಯ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 8 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡ 8 ವಿಕೆಟ್ ನಷ್ಟಕ್ಕೆ 143 ರನ್ ಪೇರಿಸಿತ್ತು. ವಿಂಡೀಸ್ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಇನ್ನು 10 ಎಸೆತ ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 144 ರನ್ ಬಾರಿಸಿ ಗೆಲುವಿನ ದಡ ಸೇರಿತು.
ವಿಂಡೀಸ್ ಪರ ಸಿಮೋನ್ಸ್ 16, ಇವಿನ್ ಲೇವಿಸ್ 56, ನಿಕೋಲಸ್ ಪೂರನ್ 12, ಕ್ರಿಸ್ ಗೇಯ್ಲ್ 12 ಮತ್ತು ಕೀರನ್ ಪೊಲಾರ್ಡ್ 26 ರನ್ ಬಾರಿಸಿದ್ದಾರೆ. ಆಫ್ರಿಕಾ ಪರ ಡ್ವೈನ್ ಪ್ರಿಟೋರಿಯಸ್ 3, ಕೇಶವ್ ಮಹಾರಾಜ್ 2 ವಿಕೆಟ್ ಪಡೆದಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ನಲ್ಲಿ ರೀಜಾ ಹೆಂಡ್ರಿಕ್ಸ್ 39, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ ಅಜೇಯ 43 ಮತ್ತು ಐಡೆನ್ ಮಾರ್ಕ್ರಾಮ್ ಅಜೇಯ 51 ರನ್ ಸಿಡಿಸಿದರು.
0 comments:
Post a Comment