ದುಬೈ, ಅಕ್ಟೋಬರ್ 29, 2021 (ಕರಾವಳಿ ಟೈಮ್ಸ್) : ಇಲ್ಲಿನ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಟಿ-20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಮೊ
ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಆರು ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಕುಸಾಲ್ ಪರೇರ 35 ರನ್ ಹಾಗೂ ಅಸಲಂಕಾ 35 ರನ್, ಭಾನುಕಾ ರಾಜಪಕ್ಸೆ ಅಜೇಯ 33 ರನ್, ನಾಯಕ ದಸೂನ್ ಶನಕ 12 ರನ್ ಗಳಿಸಿದರು.
155 ರನ್ ಗುರಿ ಪಡೆದ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಹಾಗೂ ನಾಯಕ ಆ್ಯರೋನ್ ಫಿಂಚ್ ಮೊದಲ ವಿಕೆಟ್‌ಗೆ 70 ರನ್ ಸಿಡಿಸಿತು. ಫಿಂಚ್ 23 ಎಸೆತದಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 37 ರನ್ ಗಳಿಸಿ ಔಟಾದರು. ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 5 ರನ್ ಗಳಿಸಿ ನಿರ್ಗಮಿಸಿದರು. ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಜೊತೆಯಾಟದಿಂದ ಆಸ್ಟ್ರೇಲಿಯಾ ಗೆಲುವಿನ ಹಾದಿಯಲ್ಲಿ ಮುನ್ನಡೆಯಿತು. ಅಂತಿಮ 30 ಎಸೆತದಲ್ಲಿ ಅಸ್ಟ್ರೇಲಿಯಾ ಗೆಲುವಿಗೆ 25 ರನ್ ಅವಶ್ಯಕತೆ ಇತ್ತು. ಗೆಲುವಿನ ಸನಿಹದಲ್ಲಿ ಡೇವಿಡ್ ವಾರ್ನರ್ ವಿಕೆಟ್ ಕೈಚೆಲ್ಲಿದರು. ವಾರ್ನರ್ 47 ಎಸೆತದಲ್ಲಿ 10 ಬೌಂಡರಿ ಮೂಲಕ 65 ರನ್ ಸಿಡಿಸಿದರು. ಸ್ಟೀವ್ ಸ್ಮಿತ್ ಹಾಗೂ ಮಾರ್ಕಸ್ ಸ್ಟೊಯ್ನಿಸ್ ಜೊತೆಯಾಟ ಆಸ್ಟ್ರೇಲಿಯಾ ತಂಡದ ಗೆಲುವು ಖಚಿತ ಪಡಿಸಿತು. ಸ್ಮಿತ್ ಅಜೇಯ 28 ರನ್ ಸಿಡಿಸಿದರೆ, ಸ್ಟೊಯ್ನಿಸ್ ಅಜೇಯ 16 ರನ್ ಸಿಡಿಸಿದರು. ಈ ಮೂಲಕ 17 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ಗುರಿ ತಲುಪಿತು.
ಶ್ರೀಲಂಕಾ ವಿರುದ್ಧದ ಗೆಲುವಿನ ಬಳಿಕ ಆಸ್ಟ್ರೇಲಿಯಾ ಮೊದಲ ಗುಂಪಿನ ಅಂಕಪಟ್ಟಿಯಲ್ಲಿ 3ನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದೆ. ಮೊದಲ ಸ್ಥಾನದಲ್ಲಿರುವ ಇಂಗ್ಲೆಂಡ್ ಕೂಡ 2 ಪಂದ್ಯದಿಂದ 2 ಗೆಲುವು ಸಾಧಿಸಿ 4 ಅಂಕ ಸಂಪಾದಿಸಿದೆ. ಆದರೆ ಆಸ್ಟ್ರೇಲಿಯಾಗಿಂತ ಉತ್ತಮ ರನ್‌ರೇಟ್ ಹೊಂದಿರುವ ಕಾರಣ ಮೊದಲ ಸ್ಥಾನದಲ್ಲಿದೆ. ಇತ್ತ ಶ್ರೀಲಂಕಾ 2ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಜಾರಿದೆ.
ಎರಡನೇ ಗುಂಪಿನ ಅಂಕಪಟ್ಟಿಯಲ್ಲಿ ಪಾಕಿಸ್ತಾನ 2 ಪಂದ್ಯ ಗೆದ್ದು ಮೊದಲ ಸ್ಥಾನದಲ್ಲಿದೆ. ತಲಾ ಒಂದೊಂದು ಪಂದ್ಯ ಗೆದ್ದಿರುವ ಆಫ್ಘಾನಿಸ್ತಾನ ಹಾಗೂ ನಮಿಬಿಯಾ ಅಂಕಪಟ್ಟಿಯಲ್ಲಿ 2 ಮತ್ತು 3ನೇ ಸ್ಥಾನದಲ್ಲಿದೆ. ಒಂದೊಂದು ಸೋಲು ಕಂಡಿರುವ ನ್ಯೂಜಿಲೆಂಡ್ ಹಾಗೂ ಭಾರತ 4 ಮತ್ತು 5ನೇ ಸ್ಥಾನದಲ್ಲಿದೆ. 2 ಸೋಲು ಅನುಭವಿಸಿರುವ ಸ್ಕಾಟ್‌ಲೆಂಡ್ ಅಂತಿಮ ಸ್ಥಾನದಲ್ಲಿದೆ.
0 comments:
Post a Comment